ಸಿಎಎಯಿಂದ ಯಾರಿಗೂ ಅನ್ಯಾಯವಾಗಲ್ಲ

02022020 Gangavathi CAA lecture
Published on

ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ.ವಸಂತಕುಮಾರ ಹೇಳಿಕೆ

ಗಂಗಾವತಿ: ಸಿಎಎಯಿಂದ ಯಾರಿಗೂ ಅನ್ಯಾಯವಾಗಲ್ಲ, ಕಾಯ್ದೆ ವಿರೋಧಿಸುವವರು ಸಂವಿಧಾನ ವಿರೋಧಿಸಿದಂತೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ.ವಸಂತಕುಮಾರ ಹೇಳಿದರು.

ನಗರದ ಐಎಂಎ ಹಾಲ್‌ನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಹರ್ಷಿ ವಾಲ್ಮೀಕಿ ಘಟಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ದೃಷ್ಟಿಯಲ್ಲಿ ರಾಷ್ಟ್ರೀಯತೆ ಚಿಂತನೆ ಮತ್ತು ಭವ್ಯ ಭಾರತ ಭವಿಷ್ಯ ಕುರಿತು ಉಪನ್ಯಾಸ ನೀಡಿದರು.

ಗಾಂಧಿ ಮತ್ತು ಅಂಬೇಡ್ಕರ್ ದೇಶದ ಉಜ್ವಲ ನಿರ್ಮಾತೃರಾಗಿದ್ದು, ಸ್ವಾತಂತ್ರ್ಯದ ಪೂರ್ವದಲ್ಲಿ ಎಲ್ಲ ಸಮುದಾಯದ ಹೋರಾಟಗಾರರು ದೇಶಕ್ಕೆ ಪ್ರಾಣ ನೀಡಿದ್ದಾರೆ. ಸಾಮರಸ್ಯತೆಯ ದೇಶದಲ್ಲಿ ಹಿಂದು ಮತ್ತು ಮುಸ್ಲಿಮರನ್ನು ವಿಭಜಿಸಲು ಸಿಎಎ ಕಾಯ್ದೆ ಅಸವನ್ನಾಗಿ ಮಾಡಿಕೊಂಡಿದ್ದು, ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಗಾಂಧಿ ಮತ್ತು ಅಂಬೇಡ್ಕರರನ್ನು ಒಪ್ಪಿಕೊಳ್ಳಬೇಕಿದ್ದು, ಸಾಹಿತ್ಯ ಮತ್ತು ಸಾಂಸ್ಕೃತಿಕ ಹಸಿವು ಇಂಗಿಸಲು ಕಾರ್ಯಕ್ರಮ ಆಯೋಜಿಸುವುದು ಸೂಕ್ತ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಭಾಸಾಪ ಮಹರ್ಷಿ ವಾಲ್ಮೀಕಿ ಘಟಕದ ತಾಲೂಕು ಅಧ್ಯಕ್ಷ ಯಂಕಪ್ಪ ಕಟ್ಟಿಮನಿ, ಪರಿಷತ್ ವಿಭಾಗೀಯ ಸಂಚಾಲಕ ಹಾಗೂ ಪುಸ್ತಕ ಪ್ರಾಧಿಕಾರ ಸದಸ್ಯ ಅಶೋಕ ರಾಯ್ಕರ್ ಮಾತನಾಡಿದರು. ಗೌರವ ಅಧ್ಯಕ್ಷ ಡಾ.ಎ.ಹನುಮಂತಪ್ಪ, ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಶ್ರೀನಿವಾಸ ಅಂಗಡಿ ಇತರರಿದ್ದರು. ಸಾಹಿತಿಗಳಾದ ಪವನಕುಮಾರ ಗುಂಡೂರು ಮತ್ತು ಶರಣಪ್ಪ ತಳ್ಳಿ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net