ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮವಾಗಲಿ

MANAVI SALIKE
ರಸಗೊಬ್ಬರ ವಿತರಣೆಯಲ್ಲಿ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ಸದಸ್ಯರು ಗಂಗಾವತಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಗುರುವಾರ ಸಲ್ಲಿಸಿದರು. ತಾಲೂಕಾಧ್ಯಕ್ಷ ಶಿವಣ್ಣ ಬೆಣಕಲ್, ಪದಾಧಿಕಾರಿಗಳಾದ ಶ್ರೀನಿವಾಸ ಹೊಸಳ್ಳಿ, ಶಿವಕುಮಾರ, ಕೆ.ಹುಸೇನಪ್ಪ ಇತರರಿದ್ದರು.
Published on

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ವಿತರಣೆಯಲ್ಲಿ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಸಮಿತಿ ಸದಸ್ಯರು ನಗರದ ತಾಲೂಕಾಡಳಿತ ಸೌಧದ ಮುಂದೆ ಗುರುವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು.

ಸಮಿತಿ ತಾಲೂಕಾಧ್ಯಕ್ಷ ಶಿವಣ್ಣ ಬೆಣಕಲ್ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಕೃಷಿ ಚುರುಕುಗೊಂಡಿದ್ದು, ಅಗತ್ಯವಿರುವ ರಸಗೊಬ್ಬರ ಪೂರೈಕೆಯಲ್ಲಿ ಸರ್ಕಾರ ವಿಫಲವಾಗಿದೆ. ಜಿಲ್ಲೆಗೆ ಬಿಡುಗಡೆಯಾದ 800ಟನ್ ರಸಗೊಬ್ಬರದಲ್ಲಿ 667.350 ಟನ್ ಗೊಬ್ಬರವನ್ನು ಸಹಕಾರಿ ಸಂಘಗಳಿಗೆ ಪೂರೈಸಲಾಗಿದೆ.

ಉಳಿದ 133 ಟನ್ ರಸಗೊಬ್ಬರವನ್ನು ರಾಯಚೂರಿನ ಬೀಜ ನಿಗಮದ ಗೋದಾಮಿನಲ್ಲಿ ಸಂಗ್ರಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ರಸಗೊಬ್ಬರ ಅಭಾವಕ್ಕೆ ಅಧಿಕಾರಿಗಳೇ ಹೊಣೆಯಾಗಿದ್ದು, ತನಿಖೆಗೊಳಪಡಿಸಬೇಕು. ಬೇಡಿಕೆಯಂತೆ ರೈತರಿಗೆ ಗೊಬ್ಬರ ವಿತರಿಸಬೇಕಿದ್ದು, ನಿರ್ಲಕ್ಷ್ಯ ವಹಿಸಿದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪದಾಧಿಕಾರಿಗಳಾದ ಶ್ರೀನಿವಾಸ ಹೊಸಳ್ಳಿ, ಶಿವಕುಮಾರ, ಕೆ.ಹುಸೇನಪ್ಪ, ಅಮರೇಶ ಕಡಗದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net