ಸಮಸ್ಯೆಗಳ ವಿರುದ್ಧ ಎಬಿವಿಪಿ ಹೋರಾಟ

UNTILETED 5
Published on

ಗಂಗಾವತಿ : ನಗರದ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಜಿಎಚ್‌ಎನ್ ವಾಣಿಜ್ಯ ಪದವಿ ಕಾಲೇಜಿನ ಆವರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ 77ನೇ ಸಂಸ್ಥಾಪನೆ ದಿನ ಅಂಗವಾಗಿ ಬುಧವಾರ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು.

ಪರಿಷತ್‌ನ ರಾಜ್ಯ ಕಾರ್ಯಕಾರಿಣಿ ಸದಸ್ಯ ಉದಯ್ ಮಾತನಾಡಿ, ವಿದ್ಯಾರ್ಥಿ ಮತ್ತು ಶಿಕ್ಷಕರನ್ನೊಳಗೊಂಡ ಪರಿಷತ್ತನ್ನು 1949ರಲ್ಲಿ ಅಸ್ತಿತ್ವಕ್ಕೆ ತರಲಾಗಿದೆ. ಪರಿಷತ್ ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆ ಶ್ರಮಿಸುತ್ತಿದೆ. ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಮೂಲಕ ಪರಿಷತ್ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪರಿಷತ್ ಪರಿಣಾಮಕಾರಿ ಹೋರಾಟ ಹಮ್ಮಿಕೊಂಡಿದ್ದು, ಶಾಲೆ,ಕಾಲೇಜು ಮತ್ತು ಹಾಸ್ಟೆಲ್ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಅತಿ ಹೆಚ್ಚು ಸದಸ್ಯತ್ವದ ಹೊಂದಿದ್ದ ದೇಶದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆ ಎಂದರು.

ಸಂಘದ ಕಾರ್ಯದರ್ಶಿ ಶರಣೇಗೌಡ ಮಾ.ಪಾಟೀಲ್, ಜಿಎಚ್‌ಎನ್ ವಾಣಿಜ್ಯ ಪದವಿ ಕಾಲೇಜಿನ ಪ್ರಾಚಾರ್ಯ ಪ್ರೊ.ಬಸವರಾಜ ಅಯೋಧ್ಯಾ, ಕೆಸಿಎಸ್ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಶರಣಬಸಪ್ಪ ಕೋಲ್ಕಾರ್, ಪರಿಷತ್‌ನ ಪದಾಧಿಕಾರಿಗಳಾದ ಪೃಥ್ವಿರಾಜ್, ಶ್ರೀಧರ್, ಕಿರಣ, ರಾಹುಲ್, ಗುರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net