

ಗಂಗಾವತಿ: ಆರೋಗ್ಯ ಮತ್ತು ಸಮಾಜಮುಖಿ ಚಟುವಟಿಕೆಗಳ ಮೂಲಕ ಲಯನ್ಸ್ ಕ್ಲಬ್ ಉತ್ತಮ ಸೇವೆ ಸಲ್ಲಿಸುತ್ತಿದ್ದು, ಶೈಕ್ಷಣಿಕ ಕ್ಷೇತ್ರವನ್ನು ಬಲಡಿಸುತ್ತಿದೆ ಎಂದು ಸಂಸದ ಕೆ.ರಾಜಶೇಖರ ಹಿಟ್ನಾಳ ಹೇಳಿದರು.
ನಗರದ ಐಎಂಎ ಹಾಲ್ನಲ್ಲಿ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಚಾರಿಟಬಲ್ ಟ್ರಸ್ಟ್ನಿಂದ ಭಾನುವಾರ ಲಯನ್ಸ್ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಆರೋಗ್ಯ ಸುಧಾರಣೆ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳ ಬೇಕಿದೆ. ಗ್ರಾಮೀಣ ಭಾಗದ ಜನರಿಗೆ ಉತ್ತಮ ಸೇವೆ ದೊರಕಬೇಕಿದೆ ಎಂದರು.
ಲಯನ್ಸ್ ಕ್ಲಬ್ ಸಾಧನೆ ಮತ್ತು ಆಸ್ಪತ್ರೆ ವಿಶೇಷತೆ ಕುರಿತು ಕ್ಲಬ್ ತಾಲೂಕಾಧ್ಯಕ್ಷ ಡಾ.ಶಿವಕುಮಾರ ಮಾಲಿಪಾಟೀಲ್ ಮಾತನಾಡಿದರು. ಆಸ್ಪತ್ರೆ ನಿರ್ಮಾಣಕ್ಕೆ ಭೂದಾನ ನೀಡಿದ ಜಿ.ಹಂಪಣ್ಣ ಹೊಸ್ಕೇರಾ ದಂಪತಿಯನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಸಂಸದ ಎಸ್.ಶಿವರಾಮಗೌಡ, ಮಾಜಿ ಶಾಸಕ ಜಿ.ವೀರಪ್ಪ, ಲಯನ್ಸ್ ಕ್ಲಬ್ ಪದಾಧಿಕಾರಿಗಳಾದ ಮೋಹನ್ ಕುಮಾರ, ಜೈಮೋಲ್ ನಾಕ ಟಿ.ರಾಮಕೃಷ್ಣ, ಗಾಳಿ ಶಿವಪ್ಪ, ಜಂಬಣ್ಯ ಐಲಿ ಇತರರಿದ್ದರು.
ಲಯನ್ಸ್ ಕ್ಲಬ್‌ನಿಂದ ಕಂಪ್ಲಿ ರಸ್ತೆಯಲ್ಲಿ ನಿರ್ಮಿಸಿರುವ ಆಸ್ಪತ್ರೆ ಹೊಸ ಕಟ್ಟಡವನ್ನು ಮಾಜಿ ಸಂಸದ ಎಚ್.ಜಿ.ರಾಮುಲು ಉದ್ಘಾಟಿಸಿದರು. ಮಾಜಿ ಸಂಸದ ಎಸ್.ಶಿವರಾಮಗೌಡ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಹಿರಿಯ ವೈದ್ಯರಾದ ಡಾ.ಜಿ.ಚಂದ್ರಪ್ಪ, ಡಾ.ಎ.ಸೋಮರಾಜು, ಡಾ.ಕೆ.ಎನ್.ಮಧುಸೂಧನ್, ಲಯನ್ಸ್ ಕ್ಲಬ್ ಪದಾಧಿಕಾರಿಗಳಾದ ಜಗದೀಶಪ್ಪ ಸಿಂಗನಾಳ, ಚೇತನ ಹಿರೇಮಠ, ಅಭಿಷೇಕ ಇತರರಿದ್ದರು.