ಕಾರ್ಮಿಕರಿಗೆ ಇನ್ನೂ ತಲುಪಿಲ್ಲ ಪರಿಹಾರ; ಎಐಯುಟಿಯುಸಿ ಜಿಲ್ಲಾ ಸಮಿತಿ ಸದಸ್ಯರ ಪ್ರತಿಭಟನೆ

03092021 Gangavati AIUTUC PROTEST
Published on

ಗಂಗಾವತಿ: ಲಾಕ್‌ಡೌನ್ ಪರಿಹಾರ ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಯುಟಿಯುಸಿ ಜಿಲ್ಲಾ ಸಮಿತಿ ಸದಸ್ಯರು ನಗರದ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಮಿತಿ ಜಿಲ್ಲಾ ಸಂಚಾಲಕ ಶರಣು ಗಡ್ಡಿ ಮಾತನಾಡಿ, ಸರ್ಕಾರ ೋಷಿಸಿರುವ ಪರಿಹಾರ ಹಾಗೂ ಇತರ ಸೌಲಭ್ಯಗಳು ಕಾರ್ಮಿಕರಿಗೆ ತಲುಪಿಲ್ಲ. ಮೊದಲ ಅಲೆ ಸಂದರ್ಭ 5 ಸಾವಿರ ರೂ. ಮತ್ತು ಎರಡನೇ ಅಲೆ ವೇಳೆ 3 ಸಾವಿರ ರೂ. ಪರಿಹಾರ ಪ್ರಕಟಿಸಿದ್ದರೂ ವಿತರಿಸುವಲ್ಲಿ ಕಾರ್ಮಿಕ ಇಲಾಖೆ ವಿಲವಾಗಿದೆ. ಪರಿಹಾರ ವಿತರಣೆ, ಕರೋನಾ ಸೋಂಕಿಗೆ ಬಲಿಯಾದ ಕಾರ್ಮಿಕರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮತ್ತು ಚಿಕಿತ್ಸೆ ವೆಚ್ಚ ನೀಡುವುದು, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.ಅನುದಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net