ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ

UNTILETED 2
Published on

ಗಂಗಾವತಿ: ಕಾರ್ಮಿಕರಿಗೆ ಕನಿಷ್ಠ ವೇತನ, ಸೇವಾಭದ್ರತೆ ಮತ್ತು ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಎಐಸಿಸಿಟಿಯು ತಾಲೂಕು ಸಮಿತಿ ಸದಸ್ಯರು ನಗರದ ಗಾಂಧಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧ್ಯಕ್ಷ ವಿಜಯ ದೊರೈರಾಜು ಮಾತನಾಡಿ, ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸುವ ಮೂಲಕ ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಯನ್ನು ಕಸಿದುಕೊಳ್ಳುತ್ತಿದೆ. ಸೇವಾಭದ್ರತೆ ಇಲ್ಲ, ಕನಿಷ್ಠ ವೇತನ ಜಾರಿಗೊಳಿಸುತ್ತಿಲ್ಲ, ಮಾಸಿಕ 15 ಸಾವಿರ ರೂ. ಪಿಂಚಣಿಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಗಮನಹರಿಸುತ್ತಿಲ್ಲ. ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಕನಿಷ್ಠ ವೇತನ, ಸೇವಾಭದ್ರತೆ, ಹೊರ ಗುತ್ತಿಗೆ ಪದ್ಧತಿ ಕೈಬಿಡುವುದು, ರೈತ ವಿರೋಧಿ ಕೃಷಿ ಮಾರುಕಟ್ಟೆ ನೀತಿ ಹಿಂಪಡೆಯುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗಾಂಧಿ ವೃತ್ತದಿಂದ ಶ್ರೀಕೃಷ್ಣದೇವರಾಯ ವೃತ್ತದವರಿಗೂ ಪ್ರತಿಭಟನೆ ರ‌್ಯಾಲಿ ನಡೆಸಿದರು.

ಪದಾಧಿಕಾರಿಗಳಾದ ಪರಶುರಾಂ, ಬಾಬರ್, ಹನುಮಂತಪ್ಪ ಹುಲಿಹೈದರ್, ಹುಸೇನ್ ಸಾಬ್, ರಮೇಶ, ಮಾಯಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net