ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷೆ ರಾಜೀನಾಮೆ

Resignation
ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್‌ಗೆ ಗಂಗಾವತಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮೌಲಸಾಬ್ ದಾದೇಸಾಬ್, ಉಪಾಧ್ಯಕ್ಷ ಸ್ಥಾನಕ್ಕೆ ಪಾರ್ವತೆಮ್ಮ ದುರುಗೇಶ ದೊಡ್ಮನಿ ಗುರುವಾರ ರಾಜೀನಾಮೆ ಸಲ್ಲಿಸಿದರು.
Published on
ಗಂಗಾವತಿ: ಒಪ್ಪಂದದಂತೆ ನಗರಸಭೆ ಅಧ್ಯಕ್ಷ ಮೌಲಸಾಬ್‌ದಾದೇಸಾಬ್ ಮತ್ತು ಉಪಾಧ್ಯಕ್ಷೆ ಪಾರ್ವತೆಮ್ಮ ದುರುಗೇಶ ದೊಡ್ಮನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿಸಿ ನಲೀನ್ ಅತುಲ್‌ಗೆ ರಾಜೀನಾಮೆ ಪತ್ರವನ್ನು ಗುರುವಾರ ಸಲ್ಲಿಸಿದರು.

ಜಿಲ್ಲೆಯಲ್ಲಿ ಅತಿ ಹೆಚ್ಚು ಆದಾಯ ಹೊಂದಿರುವ ನಗರದ ನಗರಸಭೆ ಕೊನೆಯ ಅವಧಿಯ ಅಧಿಕಾರಕ್ಕಾಗಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಶಾಸಕ ಗಾಲಿ ಜನಾರ್ದನರೆಡ್ಡಿ ಬೆಂಬಲಿತರಾದ ಮೌಲಸಾಬ್ ಅಧ್ಯಕ್ಷರಾಗಿ, ಪಾರ್ವತೆಮ್ಮ ದುರುಗೇಶ ದೊಡ್ಮನಿ ಉಪಾಧ್ಯಕ್ಷರಾಗಿ ಆ.26, 2026ರಂದು ಅಧಿಕಾರ ಪಡೆದಿದ್ದರು. ಜೆಡಿಎಸ್, ಕಾಂಗ್ರೆಸ್ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದಿದ್ದು, 6 ತಿಂಗಳು ಮಾತ್ರ ಅಧಿಕಾರ ಅನುಭವಿಸುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿತ್ತು. ಅದರಂತೆ ೆ.26ಕ್ಕೆ ಅಧಿಕಾರಿ ಪೂರ್ಣಗೊಂಡಿದ್ದರೂ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಒಂದು ತಿಂಗಳು ವಿಸ್ತರಿಸಲಾಗಿತ್ತು.

ಶಾಸಕ ಗಾಲಿ ಜನಾರ್ದನರೆಡ್ಡಿ ಸೂಚನೆ ಮೇರೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಗರೊಂದಿಗೆ ಕೊಪ್ಪಳ ಡಿಸಿ ಕಚೇರಿಗೆ ತೆರಳಿ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಕ್ಕಾಗಿ ರಾಜೀನಾಮೆ ನೀಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೈಕಮಾಂಡ್ ಗಾಲಿ ಜನಾರ್ದನರೆಡ್ಡಿ ಸೂಚನೆಯಂತೆ ರಾಜೀನಾಮೆ ಸಲಿಸಿದ್ದಾಗಿ ತಿಳಿಸಿದ್ದಾರೆ. ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಚೌಡ್ಕಿ ಸೇರಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net