ನವರಾತ್ರಿ ಪ್ರಯುಕ್ತ ವಿವಿಧೆಡೆ ಹೋಮ-ಹವನ

Dasara Hemagudda Chandi Homa
ಗಂಗಾವತಿ ತಾಲೂಕಿನ ಹೇಮಗುಡ್ಡದ ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಚಂಡಿ ಹೋಮ ಶನಿವಾರ ಹಮ್ಮಿಕೊಳ್ಳಲಾಗಿತ್ತು.
Published on

ಗಂಗಾವತಿ: ತಾಲೂಕಿನ ವಾಲಿಕಿಲ್ಲಾ ಮ್ಯಾಗೋಟದ ಶ್ರೀ ಆದಿಶಕ್ತಿ ದೇವಾಲಯದಲ್ಲಿ ಲೋಕಲ್ಯಾಣ ಮತ್ತು ನವರಾತ್ರೋತ್ಸವ ನಿಮಿತ್ತ ಶನಿವಾರ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದ್ದು,ಕುಂಕುಮಾರ್ಚನೆ, ಅಭಿಷೇಕ, ಅಲಂಕಾರ, ಹೋಮ, ಪೂರ್ಣಾಹುತಿ ಮತ್ತು ಮಹಾಮಂಗಳಾರತಿ ಹಮ್ಮಿಕೊಳ್ಳಲಾಗಿತ್ತು. ದೇವಾಲಯದ ಮುಖ್ಯಸ್ಥ ಬ್ರಹ್ಮಾನಂದಯ್ಯಸ್ವಾಮೀಜಿ ಸಾನ್ನಿಧ್ಯದಲ್ಲಿ ಪೂಜೆ ನೆರವೇರಿಸಲಾಯಿತು.

ಹೇಮಗುಡ್ಡದ: ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನವರಾತ್ರೋತ್ಸವ ನಿಮಿತ್ತ ಕರೊನಾ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಹೋಮ ಮತ್ತು ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕ ಮದುವೆ ಮತ್ತು ಅಂಬಾರಿ ಮೆರವಣಿಗೆ ಕೈ ಬಿಡಲಾಗಿದೆ. ಮಾಜಿ ಸಂಸದ ಎಚ್.ಜಿ.ರಾಮುಲು ನೇತೃತ್ವದಲ್ಲಿ ಹೋಮ ನೆರವೇರಿಸಲಾಯಿತು. ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಇದ್ದರು.

ಶ್ರೀರಾಮನಗರ: 6ನೇ ವಾರ್ಡ್ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ನವರಾತ್ರೋತ್ಸವ ನಿಮಿತ್ತ ವೆಂಕಟೇಶ್ವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ತಾಲೂಕಿನ ಗೂಗಿ ಬಂಡಿ ಕ್ಯಾಂಪ್ ಶ್ರೀ ತ್ರಿಶಕ್ತಿ ದೇವಾಲಯದಲ್ಲಿ ನವರಾತ್ರೋತ್ಸವ ನಿಮಿತ್ತ ವಿಶೇಷ ಅಲಂಕಾರ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net