ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 21ರಂದು

preliminary information meeting
ಗಂಗಾವತಿ ಕನಕಗಿರಿ ರಸ್ತೆಯ ವೀರಶೆಟ್ಟಿ ಹತ್ತಿಮಿಲ್ ಆವರಣದಲ್ಲಿ ಬಣಜಿಗ ಸಮಾಜದ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಮಾಹಿತಿ ಸಭೆಯಲ್ಲಿ ಸಮಾಜದ ತಾಲೂಕಾಧ್ಯಕ್ಷ ಸೋಮನಾಥ ಪಟ್ಟಣಶೆಟ್ಟಿ ಸೋಮವಾರ ಮಾತನಾಡಿದರು. ಪದಾಧಿಕಾರಿಗಳಾದ ಎ.ಶಿವಕುಮಾರ, ಅಕ್ಕಿ ಕೊಟ್ರಪ್ಪ, ಗಾಳಿ ರುದ್ರಪ್ಪ, ರಾಚಪ್ಪ ಸಿದ್ದಾಪುರ, ಸಂಗಮೇಶಕೋಟಿ ಇತರರಿದ್ದರು.
Published on

ಗಂಗಾವತಿ: ಶೈಕ್ಷಣಿಕ ಉತ್ತೇಜನಕ್ಕಾಗಿ ಪ್ರಸಕ್ತ ಸಾಲಿನ ಪ್ರತಿಭಾಪುರಸ್ಕಾರ ಪ್ರತಿ ವರ್ಷ ಆಯೋಜಿಸಲಾಗುತ್ತಿದ್ದು, ನಗರದ ಶ್ರೀ ಚನ್ನಬಸವಸ್ವಾಮಿ ಕಲ್ಯಾಣ ಮಂಟಪದಲ್ಲಿ ಜು.21ರಂದು ಹಮ್ಮಿಕೊಳ್ಳಲಾಗಿದೆ ಎಂದು ಬಣಜಿಗ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸೋಮನಾಥ ಪಟ್ಟಣಶೆಟ್ಟಿ ಹೇಳಿದರು.

ನಗರದ ಕನಕಗಿರಿ ರಸ್ತೆಯ ವೀರಶೆಟ್ಟಿ ಹತ್ತಿಮಿಲ್ ಆವರಣದಲ್ಲಿ ಬಣಜಿಗ ಸಮಾಜದ ತಾಲೂಕು ಘಟಕದಿಂದ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಮಾಹಿತಿ ಸಭೆಯಲ್ಲಿ ಮಾತನಾಡಿದರು.

ಸಮಾಜದಿಂದ ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಗಳನ್ನು ವಿಸ್ತರಿಸಲಾಗಿದ್ದು, ಹಲವು ಕಾರ್ಯಕ್ರಮಗಳ ಮೂಲಕ ಸಮಾಜ ಸಂಘಟಿಸಲಾಗಿದೆ. ನಗರ ಸೇರಿ ತಾಲೂಕಿನ ಗ್ರಾಮೀಣ ಪ್ರದೇಶದ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪ್ರೋತ್ಸಾಹಕ್ಕಾಗಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತಿದ್ದು, ಉನ್ನತ ಶಿಕ್ಷಣ ಕಲಿಕೆಗೆ ಪ್ರೋತ್ಸಾಹಿಸಲಾಗುವುದು.

ಪ್ರತಿಭಾವಂತ ವಿದ್ಯಾರ್ಥಿಗಳು ದಾಖಲೆಗಳೊಂದಿಗೆ ಜು.10ರೊಳಗೆ ಹೆಸರು ನೋಂದಾಯಿಸಬೇಕು. ಸಮಾಜದ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಜಗದೀಶಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಪದಾಧಿಕಾರಿಗಳಾದ ಎ.ಶಿವಕುಮಾರ, ಅಕ್ಕಿ ಕೊಟ್ರಪ್ಪ, ಗಾಳಿ ರುದ್ರಪ್ಪ, ರಾಚಪ್ಪ ಸಿದ್ದಾಪುರ, ಸಂಗಮೇಶಕೋಟಿ, ಗುರುಶಾಂತಪ್ಪ, ಸಂಗಪ್ಪ ಪೂಲಭಾವಿ, ಮಂಜುನಾಥ ಮಸ್ಕಿ, ಶೇಖರಪ್ಪ ಮಸ್ಕಿ, ಅಮರೇಶಪ್ಪ ಇಂಗಳಗಿ, ಗಾಳಿ ಶಿವಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net