ಸಿಲಿಂಡರ್ ಸ್ಫೋಟವಾಗಿ ವಸ್ತುಗಳು ಭಸ್ಮ

Gangavathi cylinder blost
Published on

ಗಂಗಾವತಿ: ನಗರದ ರಾಯರ ಓಣಿಯ ತಿರುಪತಿ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡು ಅನೇಕ ವಸ್ತುಗಳು ಮಂಗಳ ವಾರ ಸುಟ್ಟು ಹೋಗಿವೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಹೊತ್ತಿಕೊಂಡಿದ್ದರಿಂದ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಮನೆಯಲ್ಲಿದ್ದ ದಿನ ಬಳಕೆ ವಸ್ತುಗಳು, ಪಾತ್ರೆಗಳು, ಬಟ್ಟೆ, ದವಸ-ಧಾನ್ಯಗಳು ಹಾಗೂ ಕೆಲ ದಾಖಲೆಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net