ಆರ್ಥಿಕತೆ ಆಧರಿಸಿ ಮೀಸಲಾತಿ ನೀಡಬೇಕು; ಕಾಡಾ ಅಧ್ಯಕ್ಷ ತಿಪ್ಪೇರುದ್ರ ಸ್ವಾಮಿ ಅಭಿಪ್ರಾಯ

16032021 Gangavati Vipra Sammelana
Published on

ವಿಪ್ರ ಅಡುಗೆದಾರರ ಜಿಲ್ಲಾ ಸಮ್ಮೇಳನ ಆಯೋಜನೆ

ಗಂಗಾವತಿ: ಜಾತಿ ಬದಲಿಗೆ ಆರ್ಥಿಕತೆ ಆಧರಿಸಿ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ ಅಭಿಪ್ರಾಯಪಟ್ಟರು.

ನಗರದ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಮಂಗಳವಾರ ವಿಪ್ರ ಅಡುಗೆದಾರರು ಮತ್ತು ಸಹಾಯಕರ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡಿದ್ದ ಜಿಲ್ಲಾ ಪ್ರಥಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಆರ್ಥಿಕವಾಗಿ ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡಬೇಕೆಂಬುದು ಸಂವಿಧಾನದ ಆಶಯವಾಗಿದೆ. ಬ್ರಾಹ್ಮಣ ಸಮುದಾಯದಲ್ಲೂ ಕಡುಬಡವರಿದ್ದಾರೆ. ಅರ್ಹರಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸುವುದರ ಜತೆಗೆ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net