ರೌಡಿಶೀಟರ್‌ಗಳು ತೊಂದರೆ ನೀಡಿದರೆ ಗಮನಕ್ಕೆ ತನ್ನಿ - ಗ್ರಾಮೀಣ ಸಿಪಿಐ ಉದಯರವಿ ಹೇಳಿಕೆ

031220 Gangavati TP Meeting
ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ನಗರದ ತಾಪಂ ಮಂಥನ ಸಭಾಂಗಣದಲ್ಲಿ ಚುನಾವಣೆಗೆ ನಿಯೋಜನೆಗೊಂಡ ಸಿಬ್ಬಂದಿಗೆ ನೀತಿ ಸಂಹಿತೆ ಕುರಿತು ಮಾಹಿತಿ ನೀಡಲಾಯಿತು.
Published on

ಗಂಗಾವತಿ: ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದ್ದು, ರೌಡಿಶೀಟರ್‌ಗಳು ತೊಂದರೆ ನೀಡಿದರೆ ಪೊಲೀಸರ ಗಮನಕ್ಕೆ ತರುವಂತೆ ಗ್ರಾಮೀಣ ಸಿಪಿಐ ಉದಯರವಿ ಹೇಳಿದರು.

ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ನಗರದ ತಾಪಂ ಮಂಥನ ಸಭಾಂಗಣದಲ್ಲಿ ತಾಲೂಕಾಡಳಿತ ಗುರುವಾರ ಆಯೋಜಿಸಿದ್ದ ಕಂದಾಯ, ತಾಪಂ, ಗ್ರಾಪಂ ಮತ್ತು ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕರ್ತವ್ಯಕ್ಕೆ ಅಡ್ಡಿಪಡಿಸುವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಇಂತಹ ಪ್ರಕರಣ ಕಂಡು ಬಂದರೆ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು.

ತಹಸೀಲ್ದಾರ್ ಎಂ.ರೇಣುಕಾ ಮಾತನಾಡಿ, ಮತಗಟ್ಟೆಗಳನ್ನು ಪರಿಶೀಲಿಸಲಾಗುತ್ತಿದ್ದು, ಬಹುತೇಕ ಮತಗಟ್ಟೆಗಳು ಶಾಲೆಗಳಲ್ಲಿವೆ.ಶಾಲೆ ಬಂದಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮೂಲಭೂತ ಸೌಲಭ್ಯ ಪಡೆಯುವಂತೆ ಸಲಹೆ ನೀಡಿದರು. ಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರತ ಸಿಬ್ಬಂದಿ ನಿರ್ವಹಿಸಬೇಕಿರುವ ನೀತಿ ಸಂಹಿತೆ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ನಗರ ಪಿಐ ವೆಂಕಟಸ್ವಾಮಿ, ತಾಪಂ ಇಒ. ಡಾ.ಮೋಹನ್, ಸಮನ್ವಯ ಶಿಕ್ಷಣಾಧಿಕಾರಿ ವಿ.ಬಿ.ಗೊಂಡಬಾಳ್, ಸಿಡಿಪಿಒ ಗಂಗಪ್ಪ ಸೇರಿ ಕಂದಾಯ ನಿರೀಕ್ಷಕರು, ಗ್ರಾಮಲೆಕ್ಕಾಧಿಕಾರಿಗಳು ಮತ್ತು ಪಿಡಿಒಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net