ಮೀಸಲು ವರ್ಗ ಅಭಿವೃದ್ಧಿಯಿಂದ ವಂಚಿತ

Untitled design (2)
Published on

ಗಂಗಾವತಿ: ಎಸ್‌ಸಿ, ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿರುವ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ.ಕೃಷ್ಣಪ್ಪ ಬಣದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ತಾಲೂಕಾಡಳಿತ ಸೌಧದ ಕಚೇರಿ ಮುಂದೆ ಶುಕ್ರವಾರ ಪ್ರತಿಭಟಿಸಿದರು.

ಸಮಿತಿ ಕಲ್ಯಾಣ ಕರ್ನಾಟಕ ವಿಭಾಗೀಯ ಸಂಚಾಲಕ ಜಿ.ಹಂಪೇಶ ಹರಿಗೋಲು ಮಾತನಾಡಿ, ಎಸ್‌ಸಿ ಮತ್ತು ಎಸ್ಟಿಗೆ ಮೀಸಲಿಟ್ಟ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಂಡಿದ್ದು, ಇದರಿಂದ ಮೀಸಲು ವರ್ಗ ಅಭಿವೃದ್ಧಿಯಿಂದ ವಂಚಿತವಾಗುತ್ತಿದೆ. ಹಲವು ಯೋಜನೆಗಳು ನನೆಗುದಿಗೆ ಬಿದ್ದಿದ್ದು, ಅನುದಾನ ಬಿಡುಗಡೆಯಾಗುತ್ತಿಲ್ಲ. ಅದರಂತೆ ವಿಠಲಾಪುರದಲ್ಲಿ ಇದುವರಿಗೂ ನ್ಯಾಯಬೆಲೆ ಅಂಗಡಿ ಮಂಜೂರಾಗಿಲ್ಲ. ಸ್ಥಳೀಯರು ಬೇರೆ ಊರಿಗೆ ತೆರಳಿ ಪಡಿತರ ಪಡೆಯುವ ಸ್ಥಿತಿ ಬಂದಿದ್ದು, ಕೂಡಲೇ ನ್ಯಾಯಬೆಲೆ ಅಂಗಡಿ ಮಂಜೂರು ಮಾಡುವಂತೆ ಒತ್ತಾಯಿಸಿದರು. ನಗರ ಮತ್ತು ಗ್ರಾಮೀಣ ಭಾಗದ ಸದಸ್ಯರು ಶಿರಸ್ತೇದಾರ್ ಪ್ರಕಾಶನಾಯ್ಕಗೆ ಮನವಿ ಸಲ್ಲಿಸಿದರು.

ಪದಾಧಿಕಾರಿಗಳಾದ ಜಂಬಣ್ಣ ಗಂಗಾಮತಸ್ಥ, ಯಮನೂರಪ್ಪ ನಾಯಕ, ಬಂಡಿ ಬಲರಾಂ ನೇಕಾರ, ಹನುಮೇಶ, ಈರಪ್ಪ, ಅಹ್ಮದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net