ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್-ಗೈಡ್ಸ್ ಪೂರಕ

Gangavathi scouts
ಗಂಗಾವತಿಯಲ್ಲಿ ಹಮ್ಮಿಕೊಂಡಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನೆ ದಿನಾಚರಣೆಯಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಧ್ವಜ ಚೀಟಿ ಬಿಡುಗಡೆ ಮಾಡಿದರು. ರಾಜ್ಯ ಉಪಾಧ್ಯಕ್ಷ ಎಚ್.ಎಂ.ಸಿದ್ರಾಮಯ್ಯಸ್ವಾಮಿ, ಶಿಕ್ಷಣ ಇಲಾಖೆ ವ್ಯವಸ್ಥಾಪಕ ಶಿವಪ್ರಸಾದ, ಪ್ರಮುಖರಾದ ಎಚ್.ಸಿ.ಯಾದವ್, ಎಚ್.ಎಂ.ವಿರೂಪಾಕ್ಷಯ್ಯಸ್ವಾಮಿ ಇತರರಿದ್ದರು.
Published on

ಗಂಗಾವತಿ: ಸೇವಾ ಮನೋಭಾವ ರೂಢಿಸಿಕೊಂಡಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರಾರ್ಥಿಗಳಿಂದ ಉತ್ತಮ ಸಾಧನೆ ಸಾಧ್ಯ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ನಗರದ ಶಿಕ್ಷಣ ಇಲಾಖೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನೆ ದಿನಾಚರಣೆಯಲ್ಲಿ ಮಾತನಾಡಿದರು. ವ್ಯಕ್ತಿತ್ವ ವಿಕಸನಕ್ಕೆ ಸಂಸ್ಥೆ ಪೂರಕವಾಗಿದ್ದು, ದೈಹಿಕ, ಮಾನಸಿಕ ಸದೃಢತೆಗೆ ಸಹಕಾರಿಯಾಗಿದೆ. ರಾಷ್ಟ್ರೀಯ ಶಿಬಿರಗಳಲ್ಲೂ ಭಾಗವಹಿಸುವ ಮೂಲಕ ಸ್ಥಳೀಯ ಸಂಸ್ಥೆಗಳು ಜಿಲ್ಲೆಯ ಕೀರ್ತಿ ಹೆಚ್ಚಿಸಿವೆ ಎಂದರು.

ರಾಜ್ಯ ಉಪಾಧ್ಯಕ್ಷ ಎಚ್.ಎಂ.ಸಿದ್ರಾಮಯ್ಯಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ 800ಕ್ಕೂ ಹೆಚ್ಚು ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳಿದ್ದು, 4000 ಶಿಬಿರಾರ್ಥಿಗಳಿದ್ದಾರೆ. ಮೂಡಬಿದರೆಯಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಜಾಂಬೋರೇಟ್‌ನಲ್ಲಿ ಜಿಲ್ಲೆಯ ಶಿಬಿರಾರ್ಥಿಗಳು ಭಾಗವಹಿಸಿದ್ದು, ಗಂಗಾವತಿಯಿಂದ 250 ಕ್ವಿಂಟಾಲ್ ಅಕ್ಕಿ ಕಳುಹಿಸಲಾಗಿತ್ತು ಎಂದರು.

ಸಂಸ್ಥಾಪನೆ ದಿನ ನಿಮಿತ್ತ ಧ್ವಜ ಚೀಟಿ ಬಿಡುಗಡೆ ಮಾಡಲಾಯಿತು. ಶಿಕ್ಷಣ ಇಲಾಖೆ ವ್ಯವಸ್ಥಾಪಕ ಶಿವಪ್ರಸಾದ, ತರಬೇತುದಾರರಾದ ಸೈಯದ್ ಗುತ್ತಿ, ಹುಸೇನ್‌ಸಾಬ್ ಮಕಾನದಾರ್, ಯರ‌್ರೆಣ್ಣ, ರಜೀಯಾಬೇಗಂ, ಮುಖಂಡರಾದ

ಎಚ್.ಸಿ.ಯಾದವ್, ಎಚ್.ಎಂ.ವಿರೂಪಾಕ್ಷಯ್ಯಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net