ಮಹಿಳಾ ಬಲವರ್ಧನೆಗೆ ಹಲವು ಯೋಜನೆ

free workshop,
ಗಂಗಾವತಿ ತಾಲೂಕಿನ ಬಸಾಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಹೊಲಿಗೆ ಕಲಿಕೆ ತರಬೇತಿ ಉಚಿತ ಕಾರ್ಯಾಗಾರವನ್ನು ಗ್ರಾಪಂ ಅಧ್ಯಕ್ಷ ಅಂಜನಪ್ಪ ಶುಕ್ರವಾರ ಉದ್ಘಾಟಿಸಿದರು. ಬಿಸಿ ಟ್ರಸ್ಟ್ ಪ್ರಾದೇಶಿಕ ವಿಭಾಗದ ಜ್ಞಾನ ವಿಕಾಸ ಯೋಜನಾಧಿಕಾರಿ ಸುಧಾ, ತಾಲೂಕು ಯೋಜನಾಧಿಕಾರಿ ಶಾಂತಾನಾಯ್ಕ ಇತರರಿದ್ದರು.
Published on

ಗಂಗಾವತಿ: ಮಹಿಳೆಯರು ಸ್ವಾವಲಂಬಿಯಾಗಬೇಕಿದ್ದು, ಅರ್ಥಿಕಾಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ವಿಭಾಗದ ಜ್ಞಾನ ವಿಕಾಸ ಯೋಜನಾಧಿಕಾರಿ ಸುಧಾ ಸಲಹೆ ನೀಡಿದರು.

ತಾಲೂಕಿನ ಬಸಾಪಟ್ಟಣದ ಸಮುದಾಯು ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನ ಬಸಾಪಟ್ಟಣ ಸಿ ಕ್ಷೇತ್ರದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಹೊಲಿಗೆ ಕಲಿಕೆ ತರಬೇತಿ ಉಚಿತ ಕಾರ್ಯಾಗಾರದಲ್ಲಿ ಮಾತನಾಡಿದರು. ಮಹಿಳಾ ಬಲವರ್ಧನೆಗೆ ಟ್ರಸ್ಟ್ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ರಾಮೀಣ ಭಾಗದಲ್ಲಿ ಸಮರ್ಪಕ ಅನುಷ್ಠಾನಗೊಳಿಸಲಾಗುತ್ತಿದೆ. ಮಹಿಳಾಭಿವೃದ್ಧಿ ಪೂರಕ ಕಾರ್ಯಕ್ರಮಗಳಿಗೆ ಕಾಲ ಕಾಲಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು.

ಕಾರ್ಯಾಗಾರ ಉದ್ಘಾಟಿಸಿದ ಗ್ರಾಪಂ ಅಧ್ಯಕ್ಷ ಆಂಜನಪ್ಪ ಮಾತನಾಡಿ, ಧರ್ಮಸ್ಥಳ ಸಂಸ್ಥೆಯಿಂದ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ, ಆರ್ಥಿಕ ಮತ್ತು ಧಾರ್ಮಿಕ ಕಾರ್ಯಕ್ರಮ ಹೆಚ್ಚುತ್ತಿದ್ದು, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಆದ್ಯತೆ ನೀಡಿದೆ ಎಂದರು. ಯೋಜನೆ ಉದ್ದೇಶ, ಸ್ವಾವಲಂಬಿ ಜೀವನ ಮತ್ತು ತರಬೇತಿ ಕಾರ್ಯಾಗಾರ ಕುರಿತು ತಾಲೂಕು ಯೋಜನಾಧಿಕಾರಿ ಶಾಂತಾನಾಯ್ಕ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಹುಸೇನ್ ಬಾಷಾ, ಇಂದ್ರಮ್ಮ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುಧಾ, ವಲಯ ಮೇಲ್ವಿಚಾರಕ ದಯಾನಂದ ಸೇರಿ ಸೇವಾ ಪ್ರತಿನಿಧಿಗಳು ಹಾಗೂ ಕೇಂದ್ರದ ಸದಸ್ಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net