ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಪ್ರಾರ್ಥನೆ

UNTILETED 10
Published on

ಗಂಗಾವತಿ: ನಗರದ ಸಾಯಿನಗರದ ಶ್ರೀ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಗುರುಪೌರ್ಣಿಮೆ ನಿಮಿತ್ತ ವಿಶೇಷ ಪೂಜೆ ಮತ್ತು ಸಾಮೂಹಿಕ ಪ್ರಾರ್ಥನೆ ಗುರುವಾರ ಜರುಗಿತು.

ಶ್ರೀ ಶಿರಡಿ ಸಾಯಿಬಾಬಾ ಚಾರಿಟಬಲ್ ಟ್ರಸ್ಟ್, ಶ್ರೀ ಶಿರಡಿ ಸಾಯಿಬಾಬಾ ಸೇವಾ ಸಮಿತಿ ಮತ್ತು ಶ್ರೀಶಿರಡಿ ಸಾಯಿಬಾಬಾ ದೇವಾಲಯ ಸಮಿತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ದೇವಾಲಯದಲ್ಲಿನ ಅಮೃತ ಶಿಲೆಮೂರ್ತಿಗೆ ಕಾಕಡ ಆರತಿ, ಪಂಚಾಮತ ಅಭಿಷೇಕ, ಪುಷ್ಪಾರ್ಚನೆ, ಮಹಾಮಂಗಳಾರತಿ ನಡೆಯಿತು. ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಮತ್ತು ಸಾಮೂಹಿಕ ಅನ್ನಸಂತರ್ಪಣೆ ಮಾಡಲಾಯಿತು. ಮಧ್ಯಾಹ್ನದ ಆರತಿ, ಸಂಧ್ಯಾ ಆರತಿ, ಪಲ್ಲಕ್ಕಿ ಉತ್ಸವ, ಶೇಜಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದ್ದು, ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ದೇವಾಲಯ ಸಮಿತಿ ಅಧ್ಯಕ್ಷ ತಾಳೂರು ರಾಮಕೃಷ್ಣ ಮಾತನಾಡಿ, ದೇವಾಲಯದಲ್ಲಿ ಮೂರ್ತಿ ಪ್ರತಿಷ್ಟಾಪಿಸಿ 25 ವರ್ಷ ಪೂರ್ಣಗೊಂಡಿದೆ. ಹಾಗಾಗಿ ರಜತ ಸಿಂಹಾಸನ ಮತ್ತು ಪ್ರಭಾವಳಿ ಮಾಡಿಸಲಾಗಿದೆ. ಭಕ್ತರ ಸಹಕಾರದೊಂದಿಗೆ ವರ್ಷದಿಂದ ವರ್ಷಕ್ಕೆ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, 10 ಸಾವಿರ ಜನರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ರಾಜವಂಶಸ್ಥೆ ಲಲಿತಾರಾಣಿರಾಯಲು, ಪ್ರಧಾನ ಅರ್ಚಕ ವೆಂಕಟೇಶ ಜೋಶಿ, ಮುಖಂಡರಾದ ವಿಷ್ಣುತೀರ್ಥ ಜೋಶಿ ಆದಾಪುರ, ಪಂಪಣ್ಣನಾಯಕ ಇತರರಿದ್ದರು.

ಸತ್ಯನಾರಾಯಣಪೇಟೆ: ನಗರದ ಸತ್ಯನಾರಾಯಣ ಪೇಟೆಯ ಶ್ರೀ ಸತ್ಯನಾರಾಯಣ ದೇವಾಲಯದಲ್ಲಿ ಗುರುಪೌರ್ಣಿಮೆ ನಿಮಿತ್ತ ವಿಶೇಷ ಪೂಜೆ ಮತ್ತು ಮೂರ್ತಿಗಳಿಗೆ ಹೂವಿನ ಅಲಂಕಾರ ನೆರವೇರಿಸಲಾಯಿತು. ಸಂಜೆ ವೇಳೆ ದೇವಾಲಯದಲ್ಲಿ ಲಘು ರಥೋತ್ಸವ ಮತ್ತು ಪ್ರಸಾದ ವಿತರಣೆ ಜರುಗಿತು. ದೇವಾಲಯದ ವ್ಯವಸ್ಥಾಪಕ ವಾದಿರಾಜಾಚಾರ್ ಕಲ್ಮಂಗಿ, ಪ್ರಧಾನ ಅರ್ಚಕ ಶ್ರೀಧರಾಚಾರ್ಯ ರಾಜಪುರೋಹಿತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net