ಅಶಾಂತಿ ಸೃಷ್ಟಿಗೆ ಯತ್ನಿಸಿದವರ ವಿರುದ್ಧ ಕ್ರಮಕೈಗೊಳ್ಳಿ

GVT Valmiki Community Appeal
ಶ್ರೀ ಕನಕದಾಸ ಕುರುಬರ ಸಂಘ ಮತ್ತು ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಗಂಗಾವತಿ ಗ್ರೇಡ್ 2 ತಹಸೀಲ್ದಾರ್ ವಿ.ಎಚ್.ಹೊರಪೇಟಿಗೆ ಶುಕ್ರವಾರ ಮನವಿ ಸಲ್ಲಿಸಿದರು.
Published on

ಗಂಗಾವತಿ: ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶ್ರೀ ಕನಕದಾಸ ಕುರುಬರ ಸಂಘ ಮತ್ತು ವಾಲ್ಮೀಕಿ ನಾಯಕ ಸಮುದಾಯದಿಂದ ನಗರದ ಮಿನಿ ವಿಧಾನಸೌಧ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.

ಸಂಘದ ತಾಲೂಕು ಅಧ್ಯಕ್ಷ ಯಮನಪ್ಪ ವಿಠಲಾಪುರ ಮಾತನಾಡಿ, ಸಿಂಗನಾಳದಲ್ಲಿ ಕುರುಬ ಮತ್ತು ನಾಯಕ ಸಮುದಾಯದ ಮೇಲೆ ಕೆಲವರು ಹಲ್ಲೆ ನಡೆಸಿ ಅಶಾಂತಿ ಸೃಷ್ಟಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಮಾಯಕರ ವಿರುದ್ಧ ಹಾಕಿರುವ ಪ್ರಕರಣ ಹಿಂಪಡೆಯುವಂತೆ ಒತ್ತಾಯಿಸಿದರು. ಮುಖಂಡರಾದ ಜೋಗದ ನಾರಾಯಣಪ್ಪ ನಾಯಕ, ಶರಣೇಗೌಡ ಮಾಲಿ ಪಾಟೀಲ್, ನಾಗೇಶ ಮುಕ್ಕಣ್ಣ, ಎಂ.ದುರುಗಪ್ಪ, ಕೆ.ತಿರುಕಪ್ಪ, ಕೆ.ವೆಂಕಟೇಶ, ಮರಿಯಪ್ಪ ಸಾಲೋಣಿ, ನೀಲಕಂಠಪ್ಪ ಹೊಸಳ್ಳಿ, ಯಮನೂರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net