ಕನಿಷ್ಠ ವೇತನ ಸೇರಿ ನಾನಾ ಸೌಲಭ್ಯ ಒದಗಿಸಿ

10032020 Gangavathi Akshara Dasoha Employees protest
Published on

ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತಗೆ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಮನವಿ

ಗಂಗಾವತಿ: ಕನಿಷ್ಠ ವೇತನ ಸೇರಿ ಇತರ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಸಿಐಟಿಯು ಕಾರ್ಯಕರ್ತರೊಂದಿಗೆ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಸಮಿತಿ ಸದಸ್ಯರು ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತಗೆ ಮನವಿ ಸಲ್ಲಿಸಿದರು.

ಸಂಘದ ತಾಲೂಕು ಅಧ್ಯಕ್ಷೆ ಲಕ್ಷ್ಮಿದೇವಿ ಮಾತನಾಡಿ, ವಿದ್ಯಾರ್ಥಿಗಳ ಯೋಗಕ್ಷೇಮದೊಂದಿಗೆ ಅತಿ ಹೆಚ್ಚು ಅವಧಿಯಲ್ಲಿ ಕೆಲಸ ಮಾಡುವ ಬಿಸಿಯೂಟ ನೌಕರರನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದ್ದು, ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಕನಿಷ್ಠ ವೇತನ ಯೋಜನೆ ಮತ್ತು ಉದ್ಯೋಗ ಭದ್ರತೆ ಒದಗಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಳದ ನಿರೀಕ್ಷೆ ಹುಸಿಯಾಗಿದೆ. ಯೋಜನೆ ಯಶಸ್ವಿಯಲ್ಲಿ ಬಿಸಿಯೂಟ ನೌಕರರ ಪಾತ್ರ ಮುಖ್ಯವಾಗಿದ್ದು, ಕನಿಷ್ಠ ವೇತನ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿದರು. ಸಿಐಟಿಯು ತಾಲೂಕು ಕಾರ್ಯದರ್ಶಿ ನಿರುಪಾದಿ, ಸದಸ್ಯ ಮಂಜುನಾಥ ಡಗ್ಗಿ, ಸಂಘದ ಪದಾಧಿಕಾರಿಗಳಾದ ಅನುಸೂಯಾ, ಶಾಂತಾ, ಗಂಗಮ್ಮ, ಜಯಶ್ರೀ, ಹನುಮಮ್ಮ, ಅನ್ನಪೂರ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net