ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯ

11092021 Gangavati CPI M protest
Published on

ಗಂಗಾವತಿ: ತ್ರಿಪುರಾದಲ್ಲಿ ಹಿಂಸಾತ್ಮಕ ಕೃತ್ಯ ಖಂಡಿಸಿ ಸಿಪಿಐ(ಎಂ) ತಾಲೂಕು ಸಮಿತಿ ಕಾರ್ಯಕರ್ತರು ನಗರದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ತಾಲೂಕು ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮಾತನಾಡಿ, ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಎಡಪಕ್ಷಗಳ ಕಚೇರಿಗಳ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದು, ಸರ್ಕಾರ ನಿಯಂತ್ರಿಸುವಲ್ಲಿ ವಿಲವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ನಾಶಪಡಿಸಲು ಬಿಜೆಪಿ ಹುನ್ನಾರ ನಡೆಸಿದೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕಿದ್ದು, ತಪ್ಪಿಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು. ಕೇಂದ್ರ ಸರ್ಕಾರ ಸಂವಿಧಾನಾತ್ಮಕ ನೀತಿಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.
ವಿವಿಧ ಸಂಘಟನೆ ಪದಾಧಿಕಾರಿಗಳಾದ ಎಸ್.ಸೋಮನಾಥ, ಹುಸೇನಪ್ಪ, ಎಂ.ವೀರೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net