ಮಲಿಯಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ ಅದ್ದೂರಿ

installation of Sri Maliamma Devi idol
ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ಶ್ರೀ ಮಲಿಯಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಇತರರಿದ್ದರು.
Published on

ಗಂಗಾವತಿ: ತಾಲೂಕಿನ ವಡ್ಡರಹಟ್ಟಿಯಲ್ಲಿ ನೂತನವಾಗಿ ನಿರ್ಮಿಸಿರುವ ಶಿಲಾ ದೇಗುಲದಲ್ಲಿ ಶ್ರೀ ಮಲಿಯಮ್ಮ ದೇವಿ ಮೂರ್ತಿ ಪ್ರತಿಷ್ಠಾಪನೆ ಬುಧವಾರ ಅದ್ದೂರಿಯಾಗಿ ಜರುಗಿತು.

ಪ್ರತಿಷ್ಠಾನೆ ನಿಮಿತ್ತ ಕಳೆದ ಮೂರುದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದ್ದು, ಜಲಾಧಿವಾಸ, ಧಾನ್ಯಧಿವಾಸ ನಂತರ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಅಭಿಷೇಕ, ಹೂವಿನ ಅಲಂಕಾರ ಮತ್ತು ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ದೇಗುಲ ಲೋಕಾರ್ಪಣೆ ಹಿನ್ನೆಯಲ್ಲಿ ಗ್ರಾಮವೇ ಸಂಭ್ರಮದಲ್ಲಿದ್ದು, ಗ್ರಾಮದಾದ್ಯಂತ ವಿದ್ಯುತ್ ದೀಪಾಲಂಕಾರ ಮತ್ತು ್ಲೆಕ್ಸ್‌ಗಳೇ ತುಂಬಿದ್ದವು.

ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ವಿದ್ಯಾನಿಕೇತ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು, ಉದ್ಯಮಿಗಳಾದ ಎನ್.ಆರ್. ಶ್ರೀನಿವಾಸ, ಜೋಗದ ನಾರಾಯಣಪ್ಪ, ಕಲ್ಲಪ್ಪ ಗಡ್ಡಿ ಭಾಗವಹಿಸಿದ್ದರು. ವಿವಿಧ ಕ್ಷೇತ್ರದ ಗಣ್ಯರನ್ನು ದೇವಾಲಯ ಸಮಿತಿಯಿಂದ ಸನ್ಮಾನಿಸಲಾಯಿತು. ದೇವಾಲಯ ಸಮಿತಿ ಪದಾಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು.

ಉಪ್ಪಾರ ಓಣಿ: ನಗರದ ಉಪ್ಪಾರ್ ಓಣಿಯಲ್ಲಿ ಶ್ರೀ ಈಶ್ವರ, ನಂದೀಶ್ವರ ಮತ್ತು ಆಂಜನೇಯ ಮೂರ್ತಿಗಳ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು. ಮೂರು ದಿನ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನ.14ರಂದು ಮೂರ್ತಿ ಪ್ರತಿಷ್ಠಾಪನೆ ಜರುಗಲಿದೆ. ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯ, ರುದ್ರಮುನಿ ಸ್ವಾಮಿಗಳ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ದೇವಾಲಯ ಸಮಿತಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net