

ಗಂಗಾವತಿ: ಸೊಳ್ಳೆ ಕಡಿತದಿಂದ ನಾನಾ ಕಾಯಿಲೆಗೊಳಗಾಗಿ ಪ್ರತಿ ವರ್ಷ 7ಲಕ್ಷಕ್ಕೂ ಹೆಚ್ಚು ಜನ ಮೃತಪಡುತ್ತಿದ್ದಾರೆ ಎಂದು ಒಂದನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಹೇಳಿದರು.
ತಾಲೂಕಿನ ಆನೆಗೊಂದಿ ಸ.ಪ್ರೌ.ಶಾಲೆ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಬುಧವಾರ ಹಮ್ಮಿಕೊಂಡಿದ್ದ ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ ಅಭಿಯಾನ ಮತ್ತು ಗ್ರಾಮ ದತ್ತು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸೊಳ್ಳೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಪರಿಸರ ಸ್ವಚ್ಛತೆಯೊಂದೇ ದಾರಿಯಾಗಿದ್ದು, ಶುಚಿತ್ವಕ್ಕೆ ಆದ್ಯತೆ ನೀಡಬೇಕಿದೆ. ಸಂವಿಧಾನ ಹಕ್ಕುಗಳೊಂದಿಗೆ ಕರ್ತವ್ಯಗಳನ್ನು ನೀಡಿದ್ದು, ಪ್ರತಿಯೊಬ್ಬರು ಪಾಲಿಸಬೇಕಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಗಾಣಿಗೇರ ಮಾತನಾಡಿ, ಗ್ರಾಮದಲ್ಲಿನ ಸಮಸ್ಯೆಗಳನ್ನು ಕಾನೂನು ಪದವೀಧರ ವಿದ್ಯಾರ್ಥಿಗಳು ಅಧ್ಯಯನ ಮಾಡಿದ್ದು, ಪರಿಹಾರಕ್ಕಾಗಿ ದತ್ತು ಪಡೆಯಲಾಗಿದೆ ಎಂದರು. ನಂತರ ಕಷ್ಣದೇವರಾಯ ವತ್ತದ ಬಳಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಗಂಗಾವತಿ ಚಾರಣ ಬಳಗ, ಕಿಷ್ಕಿಂಧಾ ಯುವ ಚಾರಣ ಬಳಗದಿಂದ ಶ್ರಮದಾನ ಮತ್ತು ಗ್ರಾಪಂ ಸ್ವಚ್ಛತಾ ಸಿಬ್ಬಂದಿಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು.
ಹಾಸ್ಯ ಭಾಷಣಕಾರ ಗಂಗಾವತಿ ಬೀಚಿ ಬಿ.ಪ್ರಾಣೇಶ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್, ತಾಲೂಕು ವಕೀಲರ ಸಂಘದ ಕಾರ್ಯದರ್ಶಿಎಚ್.ಎಂ ಮಂಜುನಾಥ ಮಾತನಾಡಿದರು.
ವಾಲಿಕಿಲ್ಲಾ ಮ್ಯಾಗೋಟದ ಆದಿಶಕ್ತಿ ದೇವಾಲಯ ಮುಖ್ಯಸ್ಥ ಬ್ರಹ್ಮಾನಂದ ಸ್ವಾಮೀಜಿ, ಗ್ರಾಪಂ ಅಧ್ಯಕ್ಷೆ ಮಹಾದೇವಿ ತಿಮ್ಮಪ್ಪ ಬಾಳೆಕಾಯಿ, ರಾಜವಂಶಸ್ಥರಾದ ಲಲಿತಾರಾಣಿರಾಯಲು, ರತ್ನಾ ಶ್ರೀಕಷ್ಣದೇವರಾಯ, ಕಿಷ್ಕಿಂಧಾ ಟ್ರಸ್ಟ್ ಕಾರ್ಯದರ್ಶಿ ಡಾ.ಎ.ಸೋಮರಾಜು, ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ, ಡಿವೈಎಸ್ಪಿ ಸಿದ್ಧಲಿಂಗಪ್ಪಗೌಡ ಪಾಟೀಲ, ಗಂಗಾವತಿ ಚಾರಣ ಬಳಗ ಸಂಚಾಲಕ ಡಾ.ಶಿವಕುಮಾರ ಮಾಲಿ ಪಾಟೀಲ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ತಾಪಂ ಇಒ ಲಕ್ಷ್ಮೀದೇವಿ ಯಾಧವ್ ಇತರರಿದ್ದರು.
ಬಿಜೆಪಿ ವಿವಿಧ ಮೋರ್ಚಾದಿಂದ ನಗರದ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಶ್ರಮದಾನ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛತೆ ಕೈಗೊಂಡ ಪದಾಧಿಕಾರಿಗಳು, ಪ್ಲ್ಯಾಸ್ಟಿಕ್ ಬಳಕೆ ನಿಷೇಧಕ್ಕೆ ಕೆಕೆಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಗಾಲಿ ಜನಾರ್ದನರೆಡ್ಡಿ ಮಾತನಾಡಿ, ಸ್ವಚ್ಛತೆಗೆ ಆದ್ಯತೆ ನೀಡಬೇಕಿದ್ದು, ಪ್ರಯಾಣಿಕರೊಂದಿಗೆ ಸಿಬ್ಬಂದಿ ಉತ್ತಮ ರೀತಿಯಲ್ಲಿ ವ್ಯವಹರಿಸಬೇಕು. ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡುವಂತೆ ಸಲಹೆ ನೀಡಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್, ಸದಸ್ಯ ವಾಸುದೇವ ನವಲಿ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ. ತಿಪ್ಪೇರುದ್ರಸ್ವಾಮಿ, ಮುಖಂಡರಾದ ಮನೋಹರಗೌಡ ಹೇರೂರು, ಕಾಶೀನಾಥ ಚಿತ್ರಗಾರ, ಚನ್ನವೀರನಗೌಡ, ವೀರೇಶ ಸುಳೇಕಲ್ ಇತರರಿದ್ದರು.