ಬಿಜೆಪಿಯಿಂದ ಒಡೆದಾಳುವ ನೀತಿ ಅನುಕರಣೆ

SANMANA
ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ ಗಂಗಾವತಿ ನಿವಾಸಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ನೇತೃತ್ವದ ಕಾಂಗ್ರೆಸ್ ಮುಖಂಡರು ಸೋಮವಾರ ಭೇಟಿ ನೀಡಿ ಸನ್ಮಾನಿಸಿದರು. ಶಾಸಕ ರಾಘವೇಂದ್ರ ಹಿಟ್ನಾಳ್, ಮುಖಂಡ ರವಿಕುರಗೋಡು ಇದ್ದರು.
Published on

ಗಂಗಾವತಿ: ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ ಅವರ ನಗರ ನಿವಾಸಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ನೇತೃತ್ವದ ಮುಖಂಡರು ಸೋಮವಾರ ಭೇಟಿ ನೀಡಿ ಚುನಾವಣೆ ಸಿದ್ಧತೆ ಕುರಿತು ಸಮಾಲೋಚನೆ ನಡೆಸಿದರು.

ಪಕ್ಷದಿಂದ ಅಭ್ಯರ್ಥಿ ೋಷಣೆಯಾದ ನಂತರ ಮೊದಲ ಬಾರಿಗೆ ಮಾಜಿ ಸಚಿವರ ನಿವಾಸಕ್ಕೆ ಭೇಟಿ ನೀಡಿ, ಬೆಂಬಲಿಗರೊಂದಿಗೆ ಚರ್ಚಿಸಿದರು. ಗೆಲುವಿಗೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುವಂತೆ ಮನವಿ ಮಾಡಲಾಯಿತು.

ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ ಮಾತನಾಡಿ, ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಟಗೊಳಿಸಲಾಗುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತದಾರರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಹಲವು ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್, ದೇಶದ ಅಭಿವೃದ್ಧಿ ಜತೆಗೆ ಬಡ ಜನರ ಸ್ವಾವಲಂಬಿ ಬದುಕಿಗೆ ಆದ್ಯತೆ ನೀಡಿದೆ.

ಗಂಗಾವತಿ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರು ಮತ್ತು ದುರ್ಬಲರಿಗೆ ಶಕ್ತಿ ತುಂಬಿವೆ. ಜಾತಿ, ಧರ್ಮದ ಆಧಾರದಲ್ಲಿ ಒಡೆದಾಳುವ ನೀತಿ ಅನುಸರಿಸುವ ಬಿಜೆಪಿಗೆ ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಶಾಸಕ ರಾಘವೇಂದ್ರ ಹಿಟ್ನಾಳ್, ಕಾಂಗ್ರೆಸ್ ಮುಖಂಡ ರವಿ ಕುರಗೋಡು ಸೇರಿ ನಗರ ಮತ್ತು ಗ್ರಾಮೀಣ ಭಾಗದ ಬೆಂಬಲಿಗರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net