ಹೊರ ದೇಶದಲ್ಲೂ ಯೋಗಕ್ಕೆ ಮಾನ್ಯತೆ

YOGA
ಗಂಗಾವತಿ ಬಾಲಕರ ಸ.ಪ.ಪೂ.ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಯೋಗ ಮಹೋತ್ಸವಕ್ಕೆ ಮಾಜಿ ಶಾಸಕ ಪರಣ್ಣಮುನವಳ್ಳಿ ಶುಕ್ರವಾರ ಚಾಲನೆ ನೀಡಿದರು. ಪತಂಜಲಿ ಯೋಗ ಸಮಿತಿ ರಾಜ್ಯ ಸದಸ್ಯ ಡಾ.ಎಸ್.ಬಿ.ಹಂದ್ರಾಳ್, ಜಿಪಂ ಮಾಜಿ ಸದಸ್ಯ ಎಚ್.ಎಂ. ಸಿದ್ರಾಮಯ್ಯಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಇತರರಿದ್ದರು.
Published on

ಗಂಗಾವತಿ: ಯೋಗದಿಂದ ಆರೋಗ್ಯ ಕಾಪಾಡಬಹುದಾಗಿದ್ದು, ನಿತ್ಯದ ಅಭ್ಯಾಸದಿಂದ ವೈದ್ಯರಿಂದ ದೂರವಿರಲು ಸಾಧ್ಯ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಅಂತಾರಾಷ್ಟ್ರೀಯ ಯೋಗ ದಿನ ನಿಮಿತ್ತ ನಗರದ ಬಾಲಕರ ಸ.ಪ.ಪೂ.ಕಾಲೇಜು ಮೈದಾನದಲ್ಲಿ ಪತಂಜಲಿ ಯೋಗ ಸಮಿತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಯೋಗ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು. ಹೊರ ದೇಶದಲ್ಲೂ ಯೋಗಕ್ಕೆ ಮಾನ್ಯತೆಯಿದ್ದು, ಹಲವು ರಾಷ್ಟ್ರಗಳು ಏಕಕಾಲಕ್ಕೆ ಯೋಗ ದಿನ ಆಚರಿಸುತ್ತಿವೆ. ಇತ್ತೀಚಿಗೆ ನಗರದಲ್ಲಿ ಯೋಗ ಕೇಂದ್ರಗಳು ಹೆಚ್ಚಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಸಮಿತಿ ರಾಜ್ಯ ಸದಸ್ಯ ಡಾ.ಎಸ್.ಬಿ.ಹಂದ್ರಾಳ್ ಮಾತನಾಡಿ, ಯೋಗದಿಂದ ದೇಹ ಮತ್ತು ಮನಸ್ಸು ನಿಯಂತ್ರಣದಲ್ಲಿಟ್ಟುಕೊಳ್ಳಬಹುದಾಗಿದೆ ಎಂದರು. ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು ಸಾನ್ನಿಧ್ಯವಹಿಸಿದ್ದರು. ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಜಿಪಂ ಮಾಜಿ ಸದಸ್ಯ ಎಚ್.ಎಂ. ಸಿದ್ರಾಮಯ್ಯಸ್ವಾಮಿ, ಬಿಇಒ ವೆಂಕಟೇಶ ರಾಮಚಂದ್ರಪ್ಪ, ಆರ್ಟ್ ಆ್ ಲಿವಿಂಗ್ ಶಾಂತವೀರಸ್ವಾಮಿ ಗಂಧದಮಠ, ವಿವಿಧ ಸಮಿತಿ ಪದಾಧಿಕಾರಿಗಳಾದ ನೂಲ್ವಿ ಮಲ್ಲಿಕಾರ್ಜುನ, ಎ.ಕೆ.ಮಹೇಶ್ ಕುಮಾರ, ನಾಗರಾಜ, ವಗ್ಗನಾರಾಯಣಪ್ಪ , ಡಾ.ಅಮರೇಶ ಪಾಟೀಲ್, ಶ್ರೀನಿವಾಸ ಅಂಗಡಿ, ಶಿವಾನಂದ ತಿಮ್ಮಾಪುರ, ರಘುನಾಥ ಪವಾರ್ ಇತರರಿದ್ದರು. ನಂತರ ಸಾಮೂಹಿಕ ಯೋಗಾಭ್ಯಾಸ ನಡೆಯಿತು.

ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್: ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆ, ಪಿಯು ಕಾಲೇಜಿನಲ್ಲೂ ಯೋಗ ದಿನ ಆಚರಿಸಲಾಯಿತು. 4900 ವಿದ್ಯಾರ್ಥಿಗಳು ಮತ್ತು 500 ಶಿಕ್ಷಕರು ಏಕಕಾಲಕ್ಕೆ ಯೋಗಾಭ್ಯಾಸ ನಡೆಸಿದ್ದು, ಯೋಗದ ಮಹತ್ವ ಕುರಿತು ಮಾಹಿತಿ ನೀಡಲಾಯಿತು. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು ಮಾತನಾಡಿ, ದೇಹ, ಮನಸ್ಸು, ಚಿಂತನೆ ಮತ್ತು ಕ್ರಿಯೆಗಳನ್ನು ಒಟ್ಟುಗೂಡಿಸುವ ಶಕ್ತಿ ಯೋಗಕ್ಕೆ ಇದೆ. ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಆಧ್ಯಾತ್ಮಿಕ ಉನ್ನತಿಗೆ ಯೋಗವು ಅವಶ್ಯ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net