ಎಲ್ಲ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯ ಪಡೆಯಿರಿ

VALMIKI
ಗಂಗಾವತಿ ವಾಲ್ಮೀಕಿ ವೃತ್ತದಲ್ಲಿ ತಾಲೂಕಾಡಳಿತದಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಮಾಜಿ ಸಚಿವ ಎಂ.ಮಲ್ಲಿಕಾರ್ಜು ನಾಗಪ್ಪ, ಮಾಜಿ ಸಂಸದ ಎಸ್.ಶಿವರಾಮನಗೌಡ, ತಹಸೀಲ್ದಾರ್ ಯು.ನಾಗರಾಜ್ ಇತರರಿದ್ದರು.
Published on

ಗಂಗಾವತಿ: ಜಗತ್ತಿಗೆ ಶ್ರೇಷ್ಠ ಮಹಾಕಾವ್ಯ ನೀಡಿದ ಮಹರ್ಷಿ ವಾಲ್ಮೀಕಿ ಸಂದೇಶಗಳಿಗೆ ಸರ್ವಕಾಲಿಕ ಮಾನ್ಯತೆಯಿದೆ. ನಾಯಕ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಗಮನಹರಿಸಬೇಕಿದೆ ಎಂದು ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಹೇಳಿದರು.

ನಗರದ ವಾಲ್ಮೀಕಿ ವೃತ್ತದಲ್ಲಿ ತಾಲೂಕಾಡಳಿತ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಗುರುವಾರ ಮಾತನಾಡಿದರು. ಸರ್ಕಾರದ ಸೌಲಭ್ಯದೊಂದಿಗೆ ಉನ್ನತ ಶಿಕ್ಷಣ ಪಡೆಯಬೇಕಿದ್ದು, ಎಲ್ಲ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಪಡೆಯಬೇಕಿದೆ. ಒಗ್ಗಟ್ಟಿನಿಂದ ಸಮುದಾಯ ಸಂಘಟಿಸುವಂತೆ ಸಲಹೆ ನೀಡಿದರು. ತಹಸೀಲ್ದಾರ್ ಯು.ನಾಗರಾಜ್ ಮಾತನಾಡಿ, ರಾಮಾಯಾಣದಲ್ಲಿ ಕಿಷ್ಕಿಂಧಾ ಕ್ಷೇತ್ರದ ಉಲ್ಲೇಖವಿದ್ದು, ಮಹಾಕಾವ್ಯವನ್ನು ಜಗತ್ತೇ ಒಪ್ಪಿಕೊಂಡಿದೆ. ಪ್ರತಿಯೊಂದು ಕಾಂಡದಲ್ಲಿ ವಿಭಿನ್ನ ಸಂದೇಶಗಳಿವೆ ಎಂದರು.

ಎಸ್ಸೆಸ್ಸೆಲ್ಸಿ-ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ವಿವಿಧಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಹೋಬಳಿಗೊಂದು ಆಶ್ರಮ, ವಾಲ್ಮೀಕಿ, ಏಕಲವ್ಯ ವಸತಿ ಶಾಲೆ ಆರಂಭ, ನಾಯಕ ಸಮುದಾಯದ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಮಂಜೂರು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ಮಹಾಸಭಾದ ಪದಾಧಿಕಾರಿಗಳು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಇದಕ್ಕೂ ಮುನ್ನ ಭಾವಚಿತ್ರವನ್ನು ಆಂಜನೇಯ ದೇವಾಲಯದಿಂದ ವೇದಿಕೆವರೆಗೆ ಮೆರವಣಿಗೆ ನೆರವೇರಿಸಲಾಯಿತು. ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ರಾಜವಂಶಸ್ಥೆ ಲಲಿತಾರಾಣಿ ರಾಯಲು, ನಗರಸಭೆ ಉಪಾಧ್ಯಕ್ಷೆ ಪಾರ್ವತೆಮ್ಮ ದುರುಗೇಶ ದೊಡ್ಮನಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಚೌಡ್ಕಿ, ವ್ಯವಸ್ಥಾಪಕ ಷಣ್ಮುಖ, ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು, ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್, ಟಿಎಪಿಎಂಸಿ ಸದಸ್ಯ ಜೋಗದ ನಾರಾಯಣಪ್ಪ ನಾಯಕ, ಮುಖಂಡರಾದ ಮಲ್ಲೇಶಪ್ಪ ಹೊಸ್ಮಲಿ, ವೀರಭದ್ರಪ್ಪ ನಾಯಕ, ಎ.ಜೆ.ರಂಗನಾಥ ಇತರರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net