

ಗಂಗಾವತಿ: ಸ್ವಾತಂತ್ರೃ ಸಂಗ್ರಾಮದ ವೀರರಾಣಿ ಕಿತ್ತೂರು ಚನ್ನಮ್ಮನ ತತ್ವಗಳು ಪ್ರತಿಯೊಬ್ಬರಿಗೂ ಸ್ಪೂರ್ತಿ ಎಂದು ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಹೇಳಿದರು.
ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ತಾಲೂಕಾಡಳಿತ ಮತ್ತು ವೀರಶೈವ ಲಿಂಗಾಯತ ಪಂಚಮಶಾಲಿ ಸಂಘದ ತಾಲೂಕು ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವದಲ್ಲಿ ಮಾತನಾಡಿದರು. ಬ್ರಿಟಿಷರ ವಿರುದ್ಧ ಗೆಲವು ಸಾಧಿಸಿ ಸ್ವಾತಂತ್ರೃ ಸಂಗ್ರಾಮಕ್ಕೆ ಮುನ್ನುಡಿ ಬರೆದ ಶ್ರೇಯಸ್ಸು ಚನ್ನಮ್ಮನದು ಎಂದರು.
ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ತಹಸೀಲ್ದಾರ್ ಯು.ನಾಗರಾಜ್, ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್, ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್, ಉಪಾಧ್ಯಕ್ಷೆ ಪಾರ್ವತಮ್ಮ ದುರುಗೇಶ ದೊಡ್ಮನಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಚೌಡ್ಕಿ, ಪೌರಾಯುಕ್ತ ಆರ್. ವಿರೂಪಾಕ್ಷಮೂರ್ತಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಮುಖಂಡರಾದ ಎಚ್.ಎಸ್.ಗಿರೇಗೌಡ, ಜಿ.ಶ್ರೀಧರ್, ನಯೋಪ್ರಾ ಮಾಜಿ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ, ಸಂಘದ ಪದಾಧಿಕಾರಿಗಳಾದ ಶಿವಪ್ಪ ಯಲಬುರ್ಗಿ, ನಾಗರಾಜ ಬರಗೂರ, ವಿನಯ್ ಪಾಟೀಲ್, ಸುಭಾಷ್‌ಚಂದ್ರ ತಿಪ್ಪಶೆಟ್ಟಿ, ರಾಜೇಶ ಪಾಟೀಲ್, ಚನ್ನವೀರನಗೌಡ ಆರಾಳ್, ವೀರೇಶ ಸುಳೇಕಲ್, ಮನೋಹರಗೌಡ ಹೇರೂರು, ಬಸವರಾಜ ರಾಮತ್ನಾಳ್ ಇತರರಿದ್ದರು.