ಪಡಿತರ ಸಾಗಣೆ ವಾಹನಗಳಿಗೆ ಜಿಪಿಎಸ್ ಅಳವಡಿಸಿ

PARIHARA
ಅಪಘಾತದಲ್ಲಿ ಮೃತಪಟ್ಟ ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ನ್ಯಾಯಬೆಲೆ ಅಂಗಡಿ ಮಾಲೀಕ ಸತೀಶ್ ನಿವಾಸಕ್ಕೆ ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಕೃಷ್ಣಪ್ಪ ನೇತೃತ್ವದ ರಾಜ್ಯ ಘಟಕದ ಪದಾಧಿಕಾರಿಗಳು ಗುರುವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಂಘದ ಕಾರ್ಯಾಧ್ಯಕ್ಷ ಡಿ.ತಾಯಣ್ಣ, ರಾಜ್ಯ ಸಮಿತಿ ಸದಸ್ಯರಾದ ಹೇಮಣ್ಣ, ಹೊನ್ನಮ್ಮ, ಜಿಲ್ಲಾಧ್ಯಕ್ಷ ಮಲ್ಲಪ್ಪ, ತಾಲೂಕು ಅಧ್ಯಕ್ಷ ಕೆ. ಮಂಜುನಾಥ ಇತರರಿದ್ದರು.
Published on

ಗಂಗಾವತಿ: ಅಪಘಾತದಲ್ಲಿ ಮೃತಪಟ್ಟ ತಾಲೂಕಿನ ವಡ್ಡರಹಟ್ಟಿಯ ನ್ಯಾಯಬೆಲೆ ಅಂಗಡಿ ಮಾಲೀಕ ಸತೀಶ ನಿವಾಸಕ್ಕೆ ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಕೃಷ್ಣಪ್ಪ ನೇತೃತ್ವದ ರಾಜ್ಯ ಘಟಕದ ಪದಾಧಿಕಾರಿಗಳು ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪಡಿತರ ವಿತರಕರ ಸಂಘದ ಬೇಡಿಕೆ ಈಡೇರಿಕೆ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳಿದ್ದ ವಡ್ಡರಹಟ್ಟಿ ಪಡಿತರ ವಿತರಕ ಸತೀಶ, ತುಮಕೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು.

ರಾಜ್ಯ ಸಂಘಟನೆ ಪದಾಧಿಕಾರಿಗಳು ಮೃತನ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೇ ವೈಯಕ್ತಿಕ ಪರಿಹಾರ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಡೆಯುವ ಪಡಿತರ ಅಕ್ರಮಗಳ ನಿಯಂತ್ರಣಕ್ಕೆ ಸಗಟು ಮಳಿಗೆಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ಸಾಗಣೆ ಮಾಡುವ ವಾಹನಗಳಿಗೆ ಜಿಪಿಎಸ್ ಅಳವಡಿಸುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.

ಸಂಘದ ಕಾರ್ಯಾಧ್ಯಕ್ಷ ಡಿ.ತಾಯಣ್ಣ, ರಾಜ್ಯ ಸಮಿತಿ ಸದಸ್ಯರಾದ ಹೇಮಣ್ಣ, ಹೊನ್ನಮ್ಮ, ಜಿಲ್ಲಾಧ್ಯಕ್ಷ ಮಲ್ಲಪ್ಪ, ತಾಲೂಕು ಅಧ್ಯಕ್ಷ ಕೆ. ಮಂಜುನಾಥ, ಕಾರಟಗಿ ತಾಲೂಕು ಅಧ್ಯಕ್ಷ ನಾಗರಾಜ ಕುಲಕರ್ಣಿ, ಸದಸ್ಯರಾದ ದಾನನಗೌಡ ಹೇರೂರು, ಮಹಮ್ಮದ ಯಾಜ್, ವಿರೂಪಾಕ್ಷಿ ಕಂಬಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net