ಬಾಲಕಿಯರ ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಿ, ಎಐಡಿವೈಒ ಮನವಿ

MANAVI
ಗಂಗಾವತಿ ಕಲ್ಯಾಣ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಅರ್ಗನೈಜೇಶನ್ (ಎಐಡಿವೈಒ) ಪದಾಧಿಕಾರಿಗಳು ಹಿಂದುಳಿದ ವರ್ಗಗಳ ಇಲಾಖೆ ವಿಸ್ತೀರ್ಣಾಧಿಕಾರಿ ಉಷಾ ಮುಜುಂದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದರು. ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಶರಣುಗಡ್ಡಿ, ಜಿಲ್ಲಾ ಕಾರ್ಯದರ್ಶಿ ಶರಣುಪಾಟೀಲ್ ಇತರರಿದ್ದರು.
Published on

ಗಂಗಾವತಿ: ಇಲ್ಲಿನ ಕಲ್ಯಾಣ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್‌ಗೆ ಕಾಂಪೌಂಡ್ ನಿರ್ಮಾಣ ಹಾಗೂ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂಥ್ ಅರ್ಗನೈಜೇಷನ್ (ಎಐಡಿವೈಒ) ಪದಾಧಿಕಾರಿಗಳು ಹಿಂದುಳಿದ ವರ್ಗಗಳ ಇಲಾಖೆ ವಿಸ್ತೀರ್ಣಾಧಿಕಾರಿ ಉಷಾ ಮುಜುಂದಾರ್‌ಗೆ ಮನವಿ ಸಲ್ಲಿಸಿದರು.

ಕಲ್ಯಾಣ ನಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದು, ಕಾಂಪೌಂಡ್ ನಿರ್ಮಿಸಿಲ್ಲ. ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ ವಸತಿ ನಿಲಯದ ಸುತ್ತಲೂ ಕೊಳಚೆ ನೀರು ನಿಲ್ಲುತ್ತಿದ್ದು, ದುರ್ವಾಸನೆ ಹೆಚ್ಚಾಗಿದೆ. ಬಟ್ಟೆಗಳನ್ನು ತೊಳೆಯಲು ಮತ್ತು ಒಣಗಿಸುವ ವ್ಯವಸ್ಥೆ ಸರಿಯಿಲ್ಲ.

ಶುದ್ಧ ಕುಡಿವ ನೀರು, ಗುಣಮಟ್ಟದ ಆಹಾರ, ಗ್ರಂಥಾಲಯದ ವ್ಯವಸ್ಥೆ ಕಲ್ಪಿಸುವಂತೆ ಕಾರ್ಯಕಾರಿ ಮಂಡಳಿ ಸದಸ್ಯ ಶರಣುಗಡ್ಡಿ ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಇದ್ದರು.

ಮನವಿ ಸ್ವೀಕರಿಸಿದ ವಿಸ್ತೀರ್ಣಾಧಿಕಾರಿ ಉಷಾ ಮುಜಂದಾರ್ ಮಾತನಾಡಿ, ಸಮಸ್ಯೆಗಳ ಬಗ್ಗೆ ಸಿಇಒ ಗಮನಕ್ಕೆ ತಂದು ಶೀಘ್ರವೇ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net