ಡಿಜಿಟಲ್ ಗ್ರಂಥಾಲಯ ನಿರ್ವಹಣೆಗೆ ಸಿಇಒ ಮೆಚ್ಚುಗೆ

LIBRARY
ಆನೆಗೊಂದಿಯ ಗ್ರಾಪಂ ಡಿಜಿಟಲ್ ಗ್ರಂಥಾಲಯಕ್ಕೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಂಗಳವಾರ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಜಿಪಂ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ, ತಾಪಂ ಇಒ ಲಕ್ಷ್ಮೀದೇವಿ ಯಾದವ್ ಇತರರಿದ್ದರು.
Published on

ಗಂಗಾವತಿ: ತಾಲೂಕಿನ ಆನೆಗೊಂದಿಯ ಗ್ರಾಪಂ ಡಿಜಿಟಲ್ ಗ್ರಂಥಾಲಯಕ್ಕೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು.

ಗ್ರಂಥಾಲಯದಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡರಲ್ಲದೆ, ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು. ಮಕ್ಕಳೊಂದಿಗೆ ಸಂವಾದ ನಡೆಸಿ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಎಲ್ಲ ಗ್ರಾಪಂಗಳಲ್ಲೂ ಇಂತಹ ಡಿಜಿಟಲ್ ಗ್ರಂಥಾಲಯ ನಿರ್ವಹಿಸಬೇಕಿದ್ದು, ಮಕ್ಕಳು ಮತ್ತು ಯುವಕರನ್ನು ಸೆಳೆಯಲು ಯೋಜನೆ ರೂಪಿಸುವಂತೆ ಸಲಹೆ ನೀಡಿದರು. ಜಿಪಂ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ, ತಾಪಂ ಇಒ ಲಕ್ಷ್ಮೀದೇವಿ ಯಾದವ್, ಪಿಡಿಒ ಕೃಷ್ಣಪ್ಪ, ಗ್ರಂಥಪಾಲಕ ವೆಂಕಟೇಶ್, ಯೋಜನೆ ಸಂಚಾಲಕ ಸತ್ಯರಾಜ್, ಗ್ರಾಪಂ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net