ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ

preliminary meeting
ಗಂಗಾವತಿ ತಾಪಂ ಮಂಥನ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಬಸವ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಯು.ನಾಗರಾಜ ಮಾತನಾಡಿದರು. ತಾಪಂ ಇಒ ರಾಮರೆಡ್ಡಿ ಪಾಟೀಲ್, ನಯೋಪ್ರಾ ಮಾಜಿ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ, ವಿವಿಧ ಸಂಘಟನೆ ಪದಾಧಿಕಾರಿಗಳಾದ ರಮೇಶ ಕೋಟಿ, ಡಾ.ಶಿವಕುಮಾರ ಮಾ.ಪಾಟೀಲ್ ಇತರರಿದ್ದರು.
Published on

ಗಂಗಾವತಿ: ಸಾಂಸ್ಕೃತಿಕ ನಾಯಕ ಬಸವ ಜಯಂತ್ಯುತ್ಸವವನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಬಸವ ಸಂದೇಶ ಪ್ರಚುರಪಡಿಸಲಾಗುತ್ತಿದೆ ಎಂದು ತಹಸೀಲ್ದಾರ್ ಯು.ನಾಗರಾಜ ಹೇಳಿದರು.

ನಗರದ ತಾಪಂ ಮಂಥನ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಬುಧವಾರ ಹಮ್ಮಿಕೊಂಡಿದ್ದ ಬಸವ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಏ.30ರಂದು ಬಸವ ಜಯಂತ್ಯುತ್ಸವವನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನೆರವೇರಿಸಲಾಗುವುದು. ಬಸ್ ನಿಲ್ದಾಣದ ಬಳಿಯ ಬಸವೇಶ್ವರ ಮೂರ್ತಿಯಿಂದ ಬಾಲಕಿಯರ ಸ.ಹಿ.ಪ್ರಾ.ಶಾಲೆವರೆಗೂ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತಿದ್ದು, ವಿವಿಧ ಕಲಾತಂಡಗಳು ಭಾಗವಹಿಸಲಿವೆ. ವೇದಿಕೆ ಕಾರ್ಯಕ್ರಮದಲ್ಲಿ ಬಸವ ಸಂದೇಶ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಜರುಗಲಿವೆ. ನಗರದ ಎಲ್ಲ ವೃತ್ತಗಳಿಗೆ ದೀಪದ ಅಲಂಕಾರ, ಮೆರವಣಿಗೆ ಸಾಗುವ ರಸ್ತೆಗಳ ಸ್ವಚ್ಛತೆ ಕೈಗೆತ್ತಿಕೊಳ್ಳಲಾಗುವುದು. ಜಯಂತ್ಯುತ್ಸವ ನಿರ್ವಹಣೆಯನ್ನು ಅಯಾ ಇಲಾಖೆಗಳಿಗೆ ಜವಾಬ್ದಾರಿವಹಿಸಲಾಗಿದ್ದು, ಕಡ್ಡಾಯವಾಗಿ ನಿರ್ವಹಿಸಬೇಕು. ಜನಪ್ರತಿನಿಧಿಗಳು ಮತ್ತು ವಿವಿಧ ಸಮಾಜದ ಪ್ರಮುಖ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಮೆರವಣಿಗೆಯಲ್ಲಿ ಎಲ್ಲ ಇಲಾಖೆ ನೌಕರರು ಕಡ್ಡಾಯವಾಗಿ ಪಾಲ್ಗೊಳ್ಳಬೇಕಿದ್ದು, ಬಸವೇಶ್ವರ ಮೂರ್ತಿಯನ್ನು ಹೂವಿನಿಂದ ವಿಶೇಷವಾಗಿ ಅಲಂಕರಿಸಬೇಕು. ಅರ್ಥಪೂರ್ಣ ಆಚರಣೆಗೆ ಆದ್ಯತೆ ನೀಡುವಂತೆ ವಿವಿಧ ಸಂಘಟನೆ ಪದಾಧಿಕಾರಿಗಳು ಮನವಿ ಮಾಡಿದರು.

ವಿವಿಧ ಸಂಘಟನೆ ಪದಾಧಿಕಾರಿಗಳಾದ ಎ.ಕೆ.ಮಹೇಶಕುಮಾರ, ಮಲ್ಲಿಕಾರ್ಜುನ ಹೊಸ್ಕೇರಾ, ಶ್ಯಾಮಮೂರ್ತಿ ಐಲಿ, ಕೆ.ಬಸವರಾಜ, ಕೆ.ಅಂಬಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net