ಶೈಕ್ಷಣಿಕ ಬೆಳವಣಿಗೆಗೆ ಆದ್ಯತೆ ನೀಡಿ

UDGHATANE
ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ಉಳ್ಳಿಡಗ್ಗಿಯಲ್ಲಿ ಹಮ್ಮಿಕೊಂಡಿದ್ದ ಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಶ್ರೀ ಅನ್ನದಾನ ಭಾರತಿ ಹಡಪದ ಅಪ್ಪಣ್ಣ ಸ್ವಾಮೀಜಿ ಮಂಗಳವಾರ ಉದ್ಘಾಟಿಸಿದರು. ಸುಳೇಕಲ್ ಬೃಹನ್ಮಠದ ಪದ್ಮಾಕ್ಷರಯ್ಯ ಸ್ವಾಮೀಜಿ, ನಗರಸಭೆ ಸದಸ್ಯ ನವೀನ್ ಮಾಲಿ ಪಾಟೀಲ್, ಮಾಜಿ ಸದಸ್ಯ ಸಿದ್ದಾಪುರ ರಾಚಪ್ಪ, ಸಮಾಜದ ಜಿಲ್ಲಾಧ್ಯಕ್ಷ ಮಂಜುನಾಥ ಹಂದ್ರಹಳ್ಳಿ, ತಾಲೂಕಾಧ್ಯಕ್ಷ ಸರಿಗಮ ಹನುಮಂತಪ್ಪ ಇತರರಿದ್ದರು.
Published on

ಗಂಗಾವತಿ: ಸಂಘಟನಾತ್ಮಕ್ಕಾಗಿ ಸಮುದಾಯ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕಿದ್ದು, ಶೈಕ್ಷಣಿಕ ಬೆಳವಣಿಗೆಗೆ ಆದ್ಯತೆ ನೀಡುವಂತೆ ತಂಗಡಗಿಯ ಹಡಪದ ಅಪ್ಪಣ ಸಮಾಜದ ಪೀಠಾಧಿಪತಿ ಶ್ರೀ ಅನ್ನದಾನ ಭಾರತಿ ಹಡಪದ ಅಪ್ಪಣ್ಣ ಸ್ವಾಮೀಜಿ ಹೇಳಿದರು.

ತಾಲೂಕಿನ ವಡ್ಡರಹಟ್ಟಿಯ ಉಳ್ಳಿಡಗ್ಗಿಯಲ್ಲಿ ಹಡಪದ ಅಪ್ಪಣ್ಣ ಸಮಾಜದ ತಾಲೂಕು ಸಮಿತಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ನಿಜಶರಣ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಸಮಾಜ ಪರಿವರ್ತನೆಯಲ್ಲಿ ಪ್ರಮುಖಪಾತ್ರವಹಿಸಿದ್ದ ಹಡಪದ ಅಪ್ಪಣ್ಣನವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದ್ದು, ಸಮಸಮಾಜ ನಿರ್ಮಾಣದಲ್ಲಿ ಭಾಗಿಯಾಗಬೇಕಿದೆ. ಆರ್ಥಿಕ, ಶೈಕ್ಷಣಿಕ, ರಾಜಕೀಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದುವ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ಇದಕ್ಕೂ ಮುನ್ನ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಲಾಯಿತು. ನಂತರ ಸಾಮೂಹಿಕ ಅನ್ನಸಂತರ್ಪಣೆ ಮತ್ತು ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸುಳೇಕಲ್ ಬೃಹನ್ಮಠದ ಪದ್ಮಾಕ್ಷರಯ್ಯ ಸ್ವಾಮೀಜಿ, ನಗರಸಭೆ ಸದಸ್ಯ ನವೀನ್ ಮಾಲಿ ಪಾಟೀಲ್, ಮಾಜಿ ಸದಸ್ಯ ಸಿದ್ದಾಪುರ ರಾಚಪ್ಪ, ಸಮಾಜದ ಜಿಲ್ಲಾಧ್ಯಕ್ಷ ಮಂಜುನಾಥ ಹಂದ್ರಹಳ್ಳಿ, ತಾಲೂಕಾಧ್ಯಕ್ಷ ಸರಿಗಮ ಹನುಮಂತಪ್ಪ, ಪದಾಧಿಕಾರಿಗಳಾದ ಶಿವಣ್ಣ ನೀಲಕಮಲ, ಶರಣಪ್ಪ ಎಸ್.ಬಿ.ನಗರ, ಮುಖಂಡರಾದ ಶಿವಪ್ಪ ಹತ್ತಿಮರದ, ಖಾಸಿಂಸಾಬ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net