ಕ್ಷೇತ್ರಾಭಿವೃದ್ಧಿ ಸಂಕಲ್ಪದೊಂದಿಗೆ ಮಾಲೆಧಾರಣೆ, ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿಕೆ

Hanumanale
ಗಂಗಾವತಿ ತಾಲೂಕಿನ ಪಂಪಾಸರೋವರದ ಹನುಮಮಾಲೆ ಧಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಗಾಲಿ ಜನಾರ್ದರನೆಡ್ಡಿ ವಿಶೇಷ ಪೂಜೆ ನೆರವೇರಿಸಿದರು. ಮುಖಂಡರಾದ ಮನೋಹರಗೌಡ ಹೇರೂರು, ಡಿ.ಕೆ.ಆಗೋಲಿ, ವೀರೇಶ ಬಲ್ಕುಂದಿ, ಪಂಪಣ್ಣನಾಯಕ ಇತರರಿದ್ದರು.
Published on

ಗಂಗಾವತಿ: ಅಭಿವೃದ್ಧಿ ಸಂಕಲ್ಪದೊಂದಿಗೆ ಹನುಮಮಾಲೆ ಧರಿಸಿದ್ದು, ಅಂಜನಾದ್ರಿ ಕ್ಷೇತ್ರವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸುವ ದೃಢಸಂಕಲ್ಪ ಹೊಂದಿದ್ದೇನೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.

ತಾಲೂಕಿನ ಪಂಪಾಸರೋವರದಲ್ಲಿ ಹಮ್ಮಿಕೊಂಡಿದ್ದ ಹನುಮಮಾಲೆ ಧಾರಣೆ ಕಾರ್ಯಕ್ರಮ ನಂತರ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 240 ಕೋಟಿ ರೂ. ಮಂಜೂರಾಗಿದ್ದು, ಕೆಕೆಆರ್‌ಡಿಬಿಯೂ ನೆರವು ನೀಡಿದೆ.

ರಸ್ತೆ ಅಭಿವೃದ್ಧಿ ಜತೆಗೆ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸುವ ಯೋಜನೆ ರೂಪಿಸಲಾಗಿದೆ. ಹನುಮಮಾಲೆ ವಿಸರ್ಜನೆ ಕಾರ್ಯಕ್ರಮ ನಿಮಿತ್ತ ಬೆಟ್ಟಕ್ಕೆ ವಿದ್ಯುತ್ ದೀಪಾಲಂಕಾರ, 3 ದಿನ ಉಪಹಾರ, ಊಟದ ವ್ಯವಸ್ಥೆ, ಪಾರ್ಕಿಂಗ್ ಸೇರಿ ಹಲವು ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಬೆಟ್ಟದಲ್ಲಿ ದೇವಾಲಯ ನವೀಕರಣ ಜತೆಗೆ ಸಮಾನಮನಸ್ಕರೊಂದಿಗೆ ಕೂಡಿಕೊಂಡು ಗೋಪುರಕ್ಕೆ ಚಿನ್ನ ಲೇಪನ ಕೈಗೊಳ್ಳಲು ನಿರ್ಧರಿಸಲಾಗಿದೆ. 20 ಕೋಟಿ ರೂ.ವೆಚ್ಚದಲ್ಲಿ ರೋಪ್‌ವೇ ನಿರ್ಮಿಸಲಾಗುವುದು. ಕೇಂದ್ರ ಸರ್ಕಾರದ ನೆರವಿನೊಂದಿಗೆ ರಸ್ತೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ವಿಶೇಷ ಪೂಜೆ: ಪಂಪಾಸರೋವರದಲ್ಲಿ ಮಾಲಾಧಾರಣೆ ನಂತರ ಅಂಜನಾದ್ರಿ ಬೆಟ್ಟಕ್ಕೆ ತೆರಳಿದ ಶಾಸಕ ರಡ್ಡಿ, ಪಾದಗಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮುಖಂಡರಾದ ಮನೋಹರಗೌಡ ಹೇರೂರು, ಡಿ.ಕೆ.ಆಗೋಲಿ, ವೀರೇಶ ಬಲ್ಕುಂದಿ, ಸಂಗಮೇಶ ಬಾದವಾಡಗಿ, ಯಮನೂರಚೌಡ್ಕಿ, ಮಲ್ಲಿಕಾರ್ಜುನಸ್ವಾಮಿ, ಟಿ.ಜಿ.ಬಾಬು, ರಮೇಶ ಹೊಸ್ಮಲಿ, ಪಂಪಣ್ಣನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net