ಹಿಂದುಳಿದವರ ಅಭಿವೃದ್ಧಿ ವಿಶೇಷ ಯೋಜನೆ

Bhumi Puja
ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಗಂಗಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ತಾಪಂ ಮಾಜಿ ಸದಸ್ಯ ಬಿ.ಕೀರಯ್ಯ, ಗಂಗಾದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ಭೀಮಪ್ಪ ಕಲ್ಮನಿ, ಮುಖಂಡರಾದ ಪರಮೇಶ್ವರಯ್ಯ, ಮಲ್ಲಯ್ಯ ಇತರರಿದ್ದರು.
Published on

ಗಂಗಾವತಿ: ಎಲ್ಲ ಕ್ಷೇತ್ರದಲ್ಲಿ ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಯೋಜನೆ ರೂಪಿಸಿದ್ದು, ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ತಾಲೂಕಿನ ಹೆಬ್ಬಾಳ ಗ್ರಾಮದ ಗಂಗಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಸಮುದಾಯಗಳು ಆರ್ಥಿಕ, ಸಾಮಾಜಿಕ ಬದಲಾವಣೆಯಾಗಬೇಕಾದರೆ ಶಿಕ್ಷಣ ಪಡೆದುಕೊಳ್ಳಬೇಕಿದೆ. ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವುದರ ಜತೆಗೆ ಸಾಧಕ ವ್ಯಕ್ತಿಗಳನ್ನಾಗಿ ರೂಪಿಸಬೇಕು. ಸಮುದಾಯ ಭವನಗಳ ನಿರ್ಮಾಣದಿಂದ ಬಡ ಸಮುದಾಯಗಳಿಗೆ ಅನುಕೂಲವಾಗಲಿದು, ಆರ್ಥಿಕ ಹೊರೆ ಕಡಿಮೆ ಮಾಡಬಹುದಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಗಂಗಾಮತ ಸಮಾಜದ ದೇವಸ್ಥಾನಕ್ಕೆ 50 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ತಾಪಂ ಮಾಜಿ ಸದಸ್ಯ ಬಿ.ಕೀರಯ್ಯ, ಗಂಗಾದೇವಿ ದೇವಸ್ಥಾನ ಸಮಿತಿ ಅಧ್ಯಕ್ಷ ಭೀಮಪ್ಪ ಕಲ್ಮನಿ, ಮುಖಂಡರಾದ ಪರಮೇಶ್ವರಯ್ಯ, ಮಲ್ಲಯ್ಯ, ನಾಗನಹಳ್ಳಿ, ಪಾತಪ್ಪ, ದೊಡ್ಡ ಭರಮಪ್ಪ, ಹನುಮಂತಪ್ಪ ಪತ್ತಂಗಿ, ಯಮನೂರಪ್ಪ , ಶರಣೇಗೌಡ, ಸಣ್ಣ ದುರುಗಪ್ಪ, ಹಿರೇ ದುರುಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net