ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಿ: ಎಸಿ ಬಸವಣ್ಣೆಪ್ಪ ಕಲ್ಲಶೆಟ್ಟಿ ಸೂಚನೆ

Published on

ಗಂಗಾವತಿ: ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು ಯಾವುದೇ ಲೋಪವಾಗದಂತೆ ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಎಸಿ ಬಸವಣ್ಣೆಪ್ಪ ಕಲ್ಲಶೆಟ್ಟಿ ಸೂಚಿಸಿದರು.

ನಗರದ ತಾಲೂಕಾಡಳಿತ ಸೌಧದಲ್ಲಿ ಗುರುವಾರ ಚುನಾವಣೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಗಂಗಾವತಿ ವಿಧಾನಸಭೆ ಚುನಾವಣೆಗಾಗಿ ಈಗಾಗಲೇ ಎಂಸಿಸಿ, ಎಇಒ, ಎ್ಎಸ್‌ಟಿ, ವಿಎಸ್‌ಟಿ, ವಿವಿಟಿ, ಎಸ್‌ಎಸ್‌ಟಿ ಮತ್ತು ಅಸಿಸ್ಟೆಂಟ್ ಅಕೌಂಟಿಂಗ್ ಟೀಮ್‌ಗಳನ್ನು ಮಾಡಲಾಗಿದ್ದು, ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಕರ್ತವ್ಯಗಳ ಕುರಿತು ಮಾಹಿತಿ ನೀಡಲಾಗುತ್ತಿದ್ದು, ತರಬೇತಿ ಆಯೋಜಿಸಲಾಗುವುದು. ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕಿದ್ದು, ದೂರುಗಳ ಬರದಂತೆ ಗಮನಹರಿಸುವಂತೆ ಸಲಹೆ ನೀಡಿದರು.

ತಹಸೀಲ್ದಾರ್ ಮಂಜುನಾಥ ಕಂಬಾಳಿಮಠ, ನಗರಸಭೆ ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ, ತಾಪಂ ಇಒ ಮಹಾಂತಗೌಡ ಪಾಟೀಲ್, ಕೃಷಿ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್, ಚುನಾವಣೆ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿ, ಕೆ.ರಂಗಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net