ಸಬಲೀಕರಣದ ಅವಕಾಶ ಸದ್ಬಳಕೆ ಆಗಲಿ

18 gvt 02
Published on

ಗಂಗಾವತಿ: ಮಹಿಳೆಯರು ಪುರುಷರಿಗೆ ಸಮಾನವಾಗಿ ಸಾಧನೆ ಮಾಡುತ್ತಿದ್ದಾರೆ ಎಂದು ಚಾರಣ ಬಳಗದ ಸಂಚಾಲಕ ಡಾ.ಶಿವಕುಮಾರ ಮಾಲಿ ಪಾಟೀಲ್ ಹೇಳಿದರು.

ನಗರದ ಶ್ರೀ ದುರ್ಗಾದೇವಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಾಲೂಕು ಘಟಕ ಶನಿವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಶೈಕ್ಷಣಿಕ ಸಾಧನೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದ್ದು, ಶಿಕ್ಷಣದೊಂದಿಗೆ ಸಂಸ್ಕಾರ ಕಲಿಸುತ್ತಿದ್ದಾಳೆ. ಮಹಿಳಾ ಸಬಲೀಕರಣಕ್ಕಾಗಿ ಹಲವು ಅವಕಾಶಗಳಿದ್ದು, ಸದುಪಯೋಗ ಪಡೆಯಬೇಕು. ಆಶಾ ಕಾರ್ಯಕರ್ತೆಯರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಗಮನಹರಿಸಬೇಕು ಎಂದರು. ಸಂಘದ ಜಿಲ್ಲಾಧ್ಯಕ್ಷ ಶರಣು ಗಡ್ಡಿ ಮಾತನಾಡಿ, ಹೋರಾಟದ ಮೂಲಕ ಕಾರ್ಯಕರ್ತೆಯರು ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದರು. ಸಂಘದ ತಾಲೂಕು ಗೌರವಾಧ್ಯಕ್ಷೆ ಶಾರದಾ ಹುಲುಗಪ್ಪ ಕಟ್ಟಿಮನಿ, ತಾಲೂಕಾಧ್ಯಕ್ಷೆ ಎ.ಜ್ಯೋತಿಲಕ್ಷ್ಮೀ ಅಯೋಧ್ಯಾ, ಪದಾಧಿಕಾರಿಗಳಾದ ದೇವಮ್ಮ, ಕೆ.ಲಲಿತಾ, ಯಲ್ಲಮ್ಮ, ಗೀತಾ, ಕಮಲಾ, ಕಂತೆಮ್ಮ, ಟಿ.ಶಾಂತಕುಮಾರಿ, ಸಂಗೀತಾ, ಶರಣು ಪಾಟೀಲ್, ಆರೋಗ್ಯ ಕಾರ್ಯಕರ್ತೆ ಮಂಜುಳಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net