ಮಕ್ಕಳ ಮೇಲಿನ ದೌರ್ಜನ್ಯ ತಡೆಯಿರಿ

PROTEST
ಕಲಬುರ್ಗಿ ಜಿಲ್ಲೆಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಭಾರತೀಯ ಮಹಿಳಾ ಒಕ್ಕೂಟದ ತಾಲೂಕು ಸಮಿತಿ ಸದಸ್ಯರು ಗಂಗಾವತಿಯ ಶಿರಸ್ತೇದಾರ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು. ತಾಲೂಕು ಸಮಿತಿ ಅಧ್ಯಕ್ಷೆ ಶಿವಮ್ಮ ಹುಡೇದ್, ಪದಾಧಿಕಾರಿಗಳಾದ ಎ.ಜ್ಯೋತಿ, ಶೇಖಮ್ಮ, ಗಂಗಮ್ಮ ಇತರರಿದ್ದರು.
Published on

ಗಂಗಾವತಿ: ಕಲಬುರ್ಗಿ ಜಿಲ್ಲೆಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಭಾರತೀಯ ಮಹಿಳಾ ಒಕ್ಕೂಟದ ತಾಲೂಕು ಸಮಿತಿ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿ, ಶಿರಸ್ತೇದಾರ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು.

ತಾಲೂಕು ಸಂಚಾಲಕಿ ಶಿವಮ್ಮ ಹುಡೇದ್ ಮಾತನಾಡಿ, ರಾಜ್ಯದಲ್ಲಿ ಅಪ್ರಾಪ್ತ ಬಾಲಕಿ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಲವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಜರುಗಿದ ಬಾಲಕಿ ಕೊಲೆ ಪ್ರಕರಣ ಅಮಾನುಷವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ತಡೆಗಾಗಿ ವಿ.ಎಸ್.ಉಗ್ರಪ್ಪ ನೀಡಿರುವ ಶಿಾರಸು ವರದಿ ಜಾರಿಗೊಳಿಸುವಂತೆ ಒತ್ತಾಯಿಸಿದರು. ಪದಾಧಿಕಾರಿಗಳಾದ ಎ.ಜ್ಯೋತಿ, ಶೇಖಮ್ಮ, ಗಂಗಮ್ಮ, ಶಕುಂತಲಾ, ದುರುಗಮ್ಮ, ಮರಿಯಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net