ಸೇವೆಯೊಂದಿಗೆ ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಿ

DOCTORS DAY
ಗಂಗಾವತಿ ಉಪವಿಭಾಗ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವೈದ್ಯರ ದಿನ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ.ಜಿ.ಎನ್. ಶ್ರೀನಿವಾಸ ಬುಧವಾರ ಉದ್ಘಾಟಿಸಿದರು. ಉಪವಿಭಾಗ ಆಸ್ಪತ್ರೆ ಆಡಳಿತಾಧಿಕಾರಿ ಈಶ್ವರ ಸವಡಿ, ಜಿಲ್ಲಾ ವೈದ್ಯಾಧಿಕಾರಿ ಲಿಂಗರಾಜು, ಸರ್ಕಾರಿ ವೈದ್ಯರ ಸಂಘದ ರಾಜ್ಯಾಧ್ಯಕ್ಷ ಡಾ.ವಿವೇಕ್ ದೊರೈ, ರಾಯಚೂರು ಜಿಲ್ಲಾ ವೈದ್ಯಾಧಿಕಾರಿ ಸುರೇಂದ್ರಬಾಬು, ವಿಜಯನಗರ ಜಿಲ್ಲಾ ವೈದ್ಯಾಧಿಕಾರಿ ಶಂಕರ ನಾಯ್ಕ ಇತರರಿದ್ದರು.
Published on

ಗಂಗಾವತಿ: ರೋಗಕ್ಕೆ ಚಿಕಿತ್ಸೆ ನೀಡುವುದರ ಜತೆಗೆ ಹರಡದಂತೆ ಎಚ್ಚರಿಕೆವಹಿಸುವ ವೈದ್ಯರೇ ಸಮಾಜಕ್ಕೆ ಆದರ್ಶ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ.ಜಿ.ಎನ್. ಶ್ರೀನಿವಾಸ ಹೇಳಿದರು.
ನಗರದ ಉಪವಿಭಾಗ ಆಸ್ಪತ್ರೆ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವೈದ್ಯರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೈದ್ಯಕೀಯ ವತ್ತಿ ಗೌರವಯುತವಾಗಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡುವುದರ ಜತೆಗೆ ಆತ್ಮಸ್ಥೈರ್ಯ ಹೆಚ್ಚಿಸಬೇಕು. ವೈದ್ಯ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮಾಹಿತಿ ಅವಲಂಬಿಸದೇ ವೈದ್ಯರಿಗೆ ಸಂಬಂಧಿಸಿದ ಪುಸ್ತಕಗಳನ್ನು ಓದಬೇಕು. ವೈದ್ಯ ಉಪನ್ಯಾಸಕರಿಂದ ಆಸ್ಪತ್ರೆಯಲ್ಲಿ ಮಾಹಿತಿ ಸಂಗ್ರಹಿಸಿ ಜ್ಞಾನ ವದ್ಧಿಸಿಕೊಳ್ಳಬೇಕು. ವೈದ್ಯಕೀಯ ವತ್ತಿಯಲ್ಲಿ ಭಾರತ ರತ್ನ ಡಾ.ಬಿ.ಸಿ.ರಾಯ್ ಅವರಂತೆ ಸೇವೆಯೊಂದಿಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಅಧ್ಯಕ್ಷತೆವಹಿಸಿದ್ದ ಉಪವಿಭಾಗ ಆಸ್ಪತ್ರೆ ಆಡಳಿತಾಧಿಕಾರಿ ಈಶ್ವರ ಸವಡಿ ಮಾತನಾಡಿ, ಜನರ ಜೀವ ಉಳಿಸುವ ವೈದ್ಯಕೀಯ ವೃತ್ತಿ ಪವಿತ್ರವಾಗಿದ್ದು, ಯಾವುದೇ ಕಾರಣಕ್ಕೂ ಕರ್ತವ್ಯ ಮರೆಯದಂತೆ ಸಲಹೆ ನೀಡಿದರು. ಜಿಲ್ಲಾ ವೈದ್ಯಾಧಿಕಾರಿ ಲಿಂಗರಾಜು, ಸರ್ಕಾರಿ ವೈದ್ಯರ ಸಂಘದ ರಾಜ್ಯಾಧ್ಯಕ್ಷ ಡಾ.ವಿವೇಕ್ ದೊರೈ, ರಾಯಚೂರು ಜಿಲ್ಲಾ ವೈದ್ಯಾಧಿಕಾರಿ ಸುರೇಂದ್ರಬಾಬು, ವಿಜಯನಗರ ಜಿಲ್ಲಾ ವೈದ್ಯಾಧಿಕಾರಿ ಶಂಕರ ನಾಯ್ಕ, ವೈದ್ಯಾಧಿಕಾರಿಗಳಾದ ಪ್ರಕಾಶ ನೀಲಗುಂದ, ರಮೇಶಬಾಬು, ಎನ್.ಮೇಟಿ, ಬಸವರೆಡ್ಡಿ, ಟಿಎಚ್‌ಒ ಗೌರಿಶಂಕರ, ಚಿತ್ರೀಕಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net