ಸಾಧಕರ ಪಟ್ಟಿಯಲ್ಲಿ ಹೆಸರು ಬರುವಂತೆ ಓದಿ

SHREERAMA
ಗಂಗಾವತಿ ತಾಲೂಕಿನ ಸಂಗಾಪುರದ ಜೈನ್ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಮನಸೆಳೆದ ರಾಮಾಯಣ ದರ್ಶನಂ ರೂಪಕ.
Published on

ಗಂಗಾವತಿ: ಉನ್ನತ ಗುರಿ ಮತ್ತು ಉದಾತ್ತ ಆಶಯಗಳೊಂದಿಗೆ ಶೈಕ್ಷಣಿಕ ಸಾಧನೆ ಮಾಡಬೇಕೆಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.

ತಾಲೂಕಿನ ಸಂಗಾಪುರದ ಜೈನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಮತ್ತು ಪಾಲಕರ ಆಶಯದಂತೆ ಮಕ್ಕಳು ಅಧ್ಯಯನ ಮಾಡಬೇಕಿದ್ದು, ಸಾಧಕರ ಪಟ್ಟಿಯಲ್ಲಿ ಹೆಸರು ಬರುವಂತೆ ಲಿತಾಂಶ ಪಡೆಯಬೇಕು. ಪಠ್ಯಕ್ಕೆ ಸೀಮಿತಗೊಳ್ಳದೇ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಸಲಹೆ ನೀಡಿದರು.

ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಮಾತನಾಡಿ, ಪಠ್ಯಕ್ರಮದೊಂದಿಗೆ ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ಉತ್ತಮ ಅಂಕಗಳಿಸಿದ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶ್ರೀರಾಮಾಯಣ ದರ್ಶನಂ ಕುರಿತು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ರೂಪಕ ಗಮನಸೆಳೆಯಿತು. ಮಾಜಿ ಸಂಸದ ಎಸ್.ಶಿವರಾಮನಗೌಡ, ಸಂಸ್ಥೆ ಅಧ್ಯಕ್ಷ ಡಾ.ಚನ್ನರಾಜ್ ರಾಯಚಂದ್, ಶಿಕ್ಷಕರಾದ ಶರತ್ ಕುಮಾರ್, ಶಶಿಧರ್ ಉಪ್ಪಾರ್, ಸೈಯ್ಯದಾ ಬೀನಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net