ಜೆಡಿಎಸ್‌ನಿಂದ ಧರ್ಮಸ್ಥಳ ಸತ್ಯ ಯಾತ್ರೆ 31ಕ್ಕೆ

Untitled design 9
ರಾಜುನಾಯಕ
Published on

ಗಂಗಾವತಿ: ಹಿಂದು ಧರ್ಮದ ಪವಿತ್ರ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ಆ.31ರಂದು ಜೆಡಿಎಸ್‌ನಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಧ್ಯಕ್ಷ ರಾಜುನಾಯಕ ತಿಳಿಸಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಧರ್ಮಸ್ಥಳ ಮತ್ತು ಹಿಂದು ಧಾರ್ಮಿಕ ವಿರೋಧಿ ಶಕ್ತಿಗಳ ವಿರುದ್ಧ ಸಮರ ಸಾರಲಿದ್ದೇವೆ. ರಾಜ್ಯದ ಎಲ್ಲ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕ್ಷೇತ್ರ ಅಸ್ಥಿರಗೊಳಿಸುವ ಷಡ್ಯಂತ್ರ ಕಾಂಗ್ರೆಸ್ ಸರ್ಕಾರ ಮಾಡುತ್ತಿದ್ದು, ಕೆಲ ಎಡಪಂಥೀಯ ಸಂಘಟನೆಗಳ ಕೈವಾಡವಿದೆ. ಸಾಮಾಜಿಕ ಜಾಲತಾಣ ಮೂಲಕ ಧರ್ಮಸ್ಥಳದ ಬಗ್ಗೆ ಆಧಾರವಿಲ್ಲದ ಪೋಸ್ಟ್‌ಗಳನ್ನು ಹಾಕಲಾಗುತ್ತಿದ್ದು, ಇಂತವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಿಂದು ವಿರೋಧಿ ನೀತಿ ರಾಜ್ಯ ಸರ್ಕಾರ ಕೈಬಿಡಬೇಕಿದ್ದು, ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯ ಕೇವಲ ಹಿಂದುಗಳದಲ್ಲ ಎಂದು ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ ಹಿಂದುಗಳ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net