

ಗಂಗಾವತಿ: ಹೊರಗುತ್ತಿಗೆ ನೌಕರರಿಗೆ ಸೌಲಭ್ಯ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಲವಾಗಿದೆ ಆರೋಪಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಆರೋಪಿಸಿದರು.
ನಗರದ ಶ್ರೀಕೃಷ್ಣದೇವರಾಯ ಕಲಾಭವನದಲ್ಲಿ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಪ್ರಥಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಬಡ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಾಗಿ ವಸತಿ ಶಾಲೆಗಳನ್ನು ರಾಜ್ಯ ಸರ್ಕಾರ ತೆರೆದರೂ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯನ್ನು ಕಡೆಗಣಿಸುತ್ತಿದೆ. ಕನಿಷ್ಠ ವೇತನ, ಕರ್ತವ್ಯ ಅವಧಿ ನಿಗದಿ ಹೀಗೆ ಹಲವು ಬೇಡಿಕೆ ಈಡೇರಿಸುತ್ತಿಲ್ಲ. ಕಡಿಮೆ ಸಂಬಳದಲ್ಲಿ ಹೆಚ್ಚಿನ ಕೆಲಸ ನಿರ್ವಹಿಸುವ ಸ್ಥಿತಿ ಬಂದಿದೆ. ಸಮ್ಮೇಳನ ನಿರ್ಣಯ ಕೈಗೊಳ್ಳುವ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದರು.
ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಸಂಘದ ಬೇಡಿಕೆಗಳು ನ್ಯಾಯಯುತವಾಗಿದ್ದು, ಸರ್ಕಾರದ ಗಮನಸೆಳೆಯಲಾಗುವುದು ಎಂದರು.
ಸಂಘದ ಗೌರವಾಧ್ಯಕ್ಷ ಗ್ಯಾನೇಶ ಕಡಗದ್, ರಾಜ್ಯ ಜಂಟಿ ಕಾರ್ಯದರ್ಶಿ ಕೆ.ಹನುಮೇಗೌಡ, ಜಿಲ್ಲಾಧ್ಯಕ್ಷ ಮೃತ್ಯುಂಜಯ ಸಾರಂಗಮಠ, ತಾಲೂಕಾಧ್ಯಕ್ಷ ದಾವಲ್‌ಸಾಬ್ ಕಂಪ್ಲಿ, ಗೌರವ ಸಲಹೆಗಾರ ಲಿಂಗಪ್ಪ ಹಣವಾಳ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಚಂದ್ರಪ್ಪ ಹೊಸ್ಕೇರಾ, ಅಮರೇಶ ಕಡಗದ್, ಹುಸೇನಪ್ಪ, ಬಸವರಾಜ ಗೋನಾಳ್,ಅಂಜಮ್ಮ ಇತರರಿದ್ದರು.