ಸ್ಥಾನಮಾನ ದೊರೆಯುವ ಸಾಧ್ಯತೆ

Gangavathi Salim ahamed visit to HRG house
ಗಂಗಾವತಿ ಎಚ್‌ಆರ್‌ಜಿ ನಿವಾಸಕ್ಕೆ ವಿಧಾನಪರಿಷತ್ ಮುಖ್ಯಸಚೇತಕ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಭೇಟಿ ನೀಡಿದರು. ಮಾಜಿ ಸಂಸದ ಎಚ್. ಜಿ. ರಾಮುಲು, ಮಾಜಿ ಎಂಎಲ್‌ಸಿ ಎಚ್.ಆರ್. ಶ್ರೀನಾಥ, ಮುಖಂಡರಾದ ಅಸೀಫ್‌ಅಲಿ, ಗೌಳಿ ರಮೇಶ ಇತರರಿದ್ದರು.
Published on

ಗಂಗಾವತಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜನಪರ ಕಾರ್ಯಕ್ರಮಗಳೊಂದಿಗೆ ಜನರಿಗೆ ಹತ್ತಿರವಾಗಿದೆ. ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸೂಕ್ತ ಸ್ಥಾನಮಾನ ದೊರೆಯುವ ವಿಶ್ವಾಸವಿದೆ. ಸಿಎಂ ಬದಲಾವಣೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ, ನೀಡುವ ಸಮಯವಲ್ಲ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ನಗರದ ಎಚ್‌ಆರ್‌ಜಿ ನಿವಾಸದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದರೂ ಇತ್ತೀಚೆಗೆ ಮೂರು ಗುಂಪುಗಳಾಗಿರುವ ಬಗ್ಗೆ ಮಾಹಿತಿಯಿದೆ. ಎಲ್ಲವನ್ನೂ ಸೂಕ್ಷ್ಮವಾಗಿ ನೋಡಲಾಗುತ್ತಿದ್ದು, ಸರಿಪಡಿಸಲು ಕೆಲ ಸಮಯ ಬೇಕಾಗುವುದು. ಪಕ್ಷ ಸಂಘಟನೆ ವಿಚಾರದಲ್ಲಿ ಯಾವುದೇ ರಾಜೀಯಾಗಲ್ಲ. ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ನಗರದ ಜುಲಾಯಿನಗರದಲ್ಲಿರುವ ಕಾಂಗ್ರೆಸ್ ಬ್ಲಾಕ್ ಕಚೇರಿಗೆ ಸಲೀಂ ಅಹ್ಮದ್ ಭೇಟಿ ನೀಡಿ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು. ಕೊಪ್ಪಳದಲ್ಲಿ ಆಯೋಜಿಸಿದ್ದ ವಿಶ್ವಶಾಂತಿಗಾಗಿ ಬೃಹತ್ ಸಮಾವೇಶದ ಕುರಿತು ಮಾಹಿತಿ ನೀಡಿದರು. ಕಾಡಾ ಅಧ್ಯಕ್ಷ ಹಸನ್‌ಸಾಬ್ ದೋಟಿಹಾಳ್, ಮಾಜಿ ಎಂಎಲ್‌ಸಿ ಎಚ್.ಆರ್. ಶ್ರೀನಾಥ, ನಗರಸಭೆ ಸದಸ್ಯರಾದ ಶಾಮೀದ್ ಮನಿಯಾರ್, ಸೋಮನಾಥ ಭಂಡಾರಿ, ಡಿಸಿಸಿ ಉಪಾಧ್ಯಕ್ಷ ಅಜಗರ್‌ಅಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net