ಜೈನ್ ವಿಶ್ವವಿದ್ಯಾಲಯ ವಿರುದ್ಧ ಕ್ರಮಕೈಗೊಳ್ಳಿ: ಗಂಗಾವತಿಯಲ್ಲಿ ಕರವೇ ಪದಾಧಿಕಾರಿಗಳ ಪ್ರತಿಭಟನೆ

160223 Gangavati Karave Protest
ಗಂಗಾವತಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ವಿ.ಎಚ್.ಹೊರಪೇಟಿಗೆ ಕರವೇ (ನಾರಾಯಣಗೌಡ) ತಾಲೂಕು ಘಟಕ ಮನವಿ ಸಲ್ಲಿಸಿತು.
Published on

ಗಂಗಾವತಿ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ಗೆ ಅವಮಾನ ಮಾಡಿದ ಬೆಂಗಳೂರಿನ ಜೈನ್ ಡೀಮ್ ಯುನಿವರ್ಸಿಟಿ ಆಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರವೇ (ನಾರಾಯಣಗೌಡ) ತಾಲೂಕು ಘಟಕ ಗುರುವಾರ ತಾಲೂಕಾಡಳಿತ ಸೌಧದ ಮುಂದೆ ಗುರುವಾರ ಪ್ರತಿಭಟನೆ ನಡೆಸಿತು.

ನಗರ ಘಟಕದ ಅಧ್ಯಕ್ಷ ಯಮನೂರ್ ಭಟ್ ಮಾತನಾಡಿ, ಡಾ.ಅಂಬೇಡ್ಕರ್ ಮತ್ತು ದಲಿತ ಸಮುದಾಯ ಅವಮಾನಿಸುವ ನಾಟಕವನ್ನು ಯುನಿವರ್ಸಿಟಿ ವಿದ್ಯಾರ್ಥಿಗಳು ಪ್ರದರ್ಶಿಸಿದ್ದು, ಇದಕ್ಕೆ ಆಡಳಿತ ಮಂಡಳಿ ಕುಮ್ಮಕ್ಕು ನೀಡಿದೆ. ಆದರೆ, ಈವರೆಗೆ ವಿವಿ ವಿರುದ್ಧ ಸರ್ಕಾರ ಕ್ರಮಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ ನಿರ್ಲಕ್ಷಿಸುತ್ತಿರುವುದು ಸರಿಯಲ್ಲ. ಕೂಡಲೇ ಆಡಳಿತ ಮಂಡಳಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕಿದ್ದು, ನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು ಬಹಿರಂಗ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಗ್ರೇಡ್ 2 ತಹಸೀಲ್ದಾರ್ ವಿ.ಎಚ್.ಹೊರಪೇಟಿಗೆ ಮನವಿ ಸಲ್ಲಿಸಲಾಯಿತು. ತಾಲೂಕಾಧ್ಯಕ್ಷ ಕೆ.ಚಂದ್ರಶೇಖರ್ ಶೆಟ್ಟಿ, ಪದಾಧಿಕಾರಿಗಳಾದ ಲಕ್ಷ್ಮಣಸಿಂಗ್, ಹುಲುಗಪ್ಪ ಕೊಜ್ಜಿ, ಹನುಮೇಶ ಕುರಬರ್, ಶರಣಪ್ಪ ಭಜಂತ್ರಿ , ಬಸವರಾಜ ಭಜಂತ್ರಿ, ಪವನ್ ಕುಮಾರ, ಮಂಜುನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net