ಕಾರ್ಯಕರ್ತರ ಶ್ರಮದಿಂದ ಹಲವೆಡೆ ಅಧಿಕಾರ - ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿಕೆ

ಗಂಗಾವತಿ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪಕ್ಷದ ಸಂಸ್ಥಾಪನ ದಿನ ಆಚರಿಸಲಾಯಿತು. ಶಾಸಕ ಗಾಲಿ ಜನಾರ್ದನರೆಡ್ಡಿ, ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್, ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಶಾಸಕ ಪರಣ್ಣಮುನವಳ್ಳಿ ಇತರರಿದ್ದರು.
ಗಂಗಾವತಿ ಬಿಜೆಪಿ ಕಚೇರಿಯಲ್ಲಿ ಭಾನುವಾರ ಪಕ್ಷದ ಸಂಸ್ಥಾಪನ ದಿನ ಆಚರಿಸಲಾಯಿತು. ಶಾಸಕ ಗಾಲಿ ಜನಾರ್ದನರೆಡ್ಡಿ, ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್, ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಶಾಸಕ ಪರಣ್ಣಮುನವಳ್ಳಿ ಇತರರಿದ್ದರು.
Published on

ಗಂಗಾವತಿ: ದೇಶದ ಭದ್ರತೆ ಮತ್ತು ಆರ್ಥಿಕ ಸುಧಾರಣೆಯಲ್ಲಿ ಬಿಜೆಪಿ ಪಾತ್ರ ಮುಖ್ಯವಾಗಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಜನಪರವಾಗಿದೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಸ್ಥಾಪನ ದಿನಾಚರಣೆಯಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕರ್ತರ ಶ್ರಮದಿಂದ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿ ಆಡಳಿತವನ್ನು ಜಗತ್ತೇ ಒಪ್ಪಿಕೊಂಡಿದೆ ಎಂದರು.

ಶ್ರೀರಾಮನವಮಿ ಹಿನ್ನೆಲೆಯಲ್ಲಿ ಶ್ರೀರಾಮ ಪಟ್ಟಾಭಿಷೇಕದ ಭಾವಚಿತ್ರಕ್ಕೆ ಪೂಜೆಯನ್ನೂ ಸಲ್ಲಿಸಲಾಯಿತು. ಮಾಜಿ ಸದಸ್ಯರಾದ ವೀರಭದ್ರಪ್ಪ ನಾಯಕ, ಜೋಗದ ಹನುಮಂತಪ್ಪ ನಾಯಕ, ಜಿಪಂ ಮಾಜಿ ಸದಸ್ಯ ಎಚ್.ಎಂ.ಸಿದ್ರಾಮಯ್ಯಸ್ವಾಮಿ, ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳಾದ ಕಾಶಿನಾಥ ಚಿತ್ರಗಾರ, ಚನ್ನಪ್ಪ ಮಳಗಿ, ಆಶೋಕ ಕಲ್‌ತಾವರಗೇರಿ, ನರಸಿಂಹರಾವ್ ಕುಲಕರ್ಣಿ, ರಾಧಾ ಉಮೇಶ, ಮನೋಹರಗೌಡ ಹೇರೂರು, ವೀರೇಶ ಬಲ್ಕುಂದಿ, ಶ್ರೀನಿವಾಸ ಧೂಳಾ ಇತರರಿದ್ದರು.

ತಾವರಗೇರಾ: ಬಿಜೆಪಿ ಸಂಸ್ಥಾಪನಾದಿನ ಅಂಗವಾಗಿ ಬಿಜೆಪಿ ಕಾರ್ಯಕರ್ತರ ಮನೆ ಮೇಲೆ ಭಾನುವಾರ ಪಕ್ಷದ ಧ್ವಜಾರೋಹಣ ಮಾಡಲಾಯಿತು. ತಾಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೂಲಕುಂಟಿ, ಕಾರ್ಯಕರ್ತರಾದ ಮಲ್ಲಪ್ಪ ಬಳೂಟಗಿ, ಬಸವರಾಜ ವಿಠಲಾಪೂರ, ಚಂದ್ರಶೇಖರ ನಾರಿನಾಳ,ಹಲ್ಲೇಶ ವಿಠಲಾಪೂರ, ಹಂಚಿ ಮಂಜುನಾಥ ಇತರರಿದ್ದರು.

ಕಾರಟಗಿ: ಭಾರತೀಯ ಜನತಾ ಪಾರ್ಟಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಕಚೇರಿ ಮೇಲೆ ಬಿಜೆಪಿ ಧ್ವಜ ಪ್ರದರ್ಶಿಸಲಾಯಿತು. ಮಂಡಲ ಅಧ್ಯಕ್ಷ ಮಂಜುನಾಥ್ ಮಸ್ಕಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮೌನೇಶ್ ದಢೇಸುಗೂರು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರತ್ನಕುಮಾರಿ, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಶಂಶುದ್ದೀನ್, ಪ್ರಮುಖರಾದ ಸಿದ್ದು ಯರಡೋಣ, ಆಂಜನೇಯ ಬೂದುಗುಂಪ, ಬಸವರಾಜ ಅಂಗಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net