ಮಕ್ಕಳನ್ನು ಶಿಕ್ಷಣದಿಂದ ವಂಚಿಸದಿರಿ

Untitled design (3)
Published on

ಗಂಗಾವತಿ: ಬಾಲ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸುವ ಶಿಕ್ಷಾರ್ಹ ಅಪರಾಧವಾಗಿದ್ದು, ಪ್ರೇರೇಪಿಸಿದರೂ ಶಿಕ್ಷೆ ತಪ್ಪಿದ್ದಲ್ಲ ಎಂದು ಜೆಎಂಎ್ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಗುಡ್ಡಪ್ಪ ಬಸವಣ್ಣೆಪ್ಪ ಹಳಾಕಾಯಿ ಹೇಳಿದರು.

ನಗರದ ಜೆಎಂಎ್ಸಿ ಮುಂಭಾಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ನಿಮಿತ್ತ ಜಿಲ್ಲಾ ಬಾಲಕಾರ್ಮಿಕ ಯೋಜನೆಯಡಿ ತಾಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. 14 ವರ್ಷದೊಳಗಿನ ಮಕ್ಕಳಿಗೆ ಓದಿನತ್ತ ಆದ್ಯತೆ ನೀಡಬೇಕಿದ್ದು, ಕೆಲಸಕ್ಕೆ ನಿಯೋಜಿಸಬಾರದು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಯೋಜನೆಯಡಿಯಲ್ಲಿ ಶಾಲೆಗೆ ದಾಖಲಿಸಬೇಕಿದೆ ಎಂದರು.

ನಗರದಾದ್ಯಂತ ಸಂಚರಿಸಿದ ಜಾಥಾ, ಜೆಎಂಎ್ಸಿ ಕೋರ್ಟ್ ಮುಂಭಾಗದಲ್ಲಿ ಸಮಾರೋಪಗೊಂಡಿತು. ಜಾಥಾದಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮೇಘಾಸೋಮಣ್ಣನವರ್, ಬಿಇಒ ಎಚ್.ಬಿ.ನಟೇಶ, ಶಿಕ್ಷಣ ಸಂಯೋಜಕ ಆನಂದ ನಾಗಮ್ಮನವರ್, ಸಿಡಿಪಿಒ ಜಯಶ್ರೀ ರಾಜಪುರೋಹಿತ್, ಪಿಎಸೈಗಳಾದ ಜಿ.ಟಿ.ನಾಗರಾಜ್, ಶಾರದಮ್ಮ, ಕಾರ್ಮಿಕ ನಿರೀಕ್ಷಕ ಎಂ.ಆಶೋಕ, ತಾಪಂ ಇಒ ರಾಮರೆಡ್ಡಿ ಪಾಟೀಲ್, ವಕೀಲರ ಸಂಘದ ತಾಲೂಕಾಧ್ಯಕ್ಷ ಎಸ್.ಎನ್.ನಾಯಕ, ಕಾರ್ಯದರ್ಶಿ ಎಚ್.ಎಂ.ಮಂಜುನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net