ಖೋಖೋ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Khokho team
ಗಂಗಾವತಿ ಜೆಎಸ್‌ಇಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಶಾಲೆಗಳ ವಲಯದ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ತಾಲೂಕಿನ ಮರಕುಂಬಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಖೋಖೋ ತಂಡ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
Published on

ಗಂಗಾವತಿ: ನಗರದ ಜೆಎಸ್‌ಇಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಶಾಲೆಗಳ ಕೇಸರಹಟ್ಟಿ ಕ್ಲಸ್ಟರ್ ಮತ್ತು ಬಸಾಪಟ್ಟಣ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಮರಕುಂಬಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಖೋಖೋ ತಂಡ ಗೆಲುವು ಸಾಧಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ಶಾಲೆಯಲ್ಲಿ ಹಲವು ವರ್ಷಗಳಿಂದ ಖೋಖೋ ತಂಡ ರಚನೆಯಾಗಿದ್ದಿಲ್ಲ. ಶಿಕ್ಷಕರ ಶ್ರಮದಿಂದ ತಂಡವನ್ನು ರಚಿಸಿದ್ದು, ಶಾಲೆಯ ಹಳೇ ವಿದ್ಯಾರ್ಥಿಗಳ ಆಸಕ್ತಿಯಿಂದ ಸಮರ್ಥ ತಂಡ ರಚನೆಯಾಗಿದೆ.

ನಿರಂತರ ತರಬೇತಿ ಮತ್ತು ಮಾರ್ಗದರ್ಶನದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಲು ಕಾರಣವಾಗಿದ್ದು, ಕ್ರೀಡಾಪಟುಗಳಿಗೆ ಪಾಲಕರ ಪ್ರೋತ್ಸಾಹ ಮುಖ್ಯವಾಗಿದೆ ಎಂದು ಮುಖ್ಯಶಿಕ್ಷಕ ಗೋಪಾಲ ಕೃಷ್ಣ ತಿಳಿಸಿದ್ದಾರೆ. ಸಿಆರ್‌ಪಿ ಬೆಟ್ಟದಪ್ಪ, ಶಿಕ್ಷಕರಾದ ಎಂ.ಹನುಮೇಶ, ಸುಂದರಕುಮಾರ, ಸೋನಿಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net