ಬೋಗಸ್ ಕಾರ್ಡ್‌ಗಳು ಕಂಡರೆ ಮಾಹಿತಿ ನೀಡಿ

Untitled design(4)
Published on

ಗಂಗಾವತಿ: ಕಾರ್ಮಿಕ ಕಾನೂನು ಸಮರ್ಪಕ ಅನುಷ್ಠಾನಕ್ಕೆ ಸಂಘಟನೆಯಿಂದ ಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಾನೂನು ಸಲಹೆಗಾರ ಶೇಖರಗೌಡ ಪಾಟೀಲ್ ಹೇಳಿದರು.

ನಗರದ ಕ್ರಾಂತಿ ಚಕ್ರ ಬಳಗದ ಕಚೇರಿಯಲ್ಲಿ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ ಸದಸ್ಯತ್ವ ನೋಂದಣಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಅಂತರ ರಾಜ್ಯ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಸ್ಥಳೀಯ ಕಾರ್ಮಿಕರಿಗೆ ಕೆಲಸ ದೊರೆಯುತ್ತಿಲ್ಲ. ಮಹಿಳಾ ಕಾರ್ಮಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಿ, ಕಾರ್ಮಿಕ ಕಾಯ್ದೆ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರ ಬೋಗಸ್ ಕಾರ್ಡ್‌ಗಳು ಕಂಡುಬಂದಲ್ಲಿ ಕೂಡಲೇ ಸಂಘಕ್ಕೆ ಹಾಗೂ ಕಾರ್ಮಿಕ ನಿರೀಕ್ಷಕರ ಕಚೇರಿಗೆ ತಿಳಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಜೆ. ಭಾರದ್ವಾಜ್ ಮಾತನಾಡಿ, ಸಂಘದ ನೋಂದಣಿ ಪೂರ್ವಸಭೆಯಾಗಿದ್ದು, ಎಲ್ಲ ಸದಸ್ಯರು ಸಂಘದ ನೀತಿ ನಿಯಮಗಳಿಗೆ ಧಕ್ಕೆಯಾಗದಂತೆ ಗಮನಹರಿಸಬೇಕು. ಎಲ್ಲ ಸಭೆಗಳಲ್ಲಿ ಪಾಲ್ಗೊಂಡು ಸಂಘ ತೀರ್ಮಾನಿಸುವ ನಿಯಮಗಳಿಗೆ ಬದ್ಧರಾಗಿರಬೇಕೆಂದರು. ಸಂಘದ ತಾಲೂಕಾಧ್ಯಕ್ಷ ಇಬ್ರಾಹಿಂ ಸೇರಿ ಪದಾಧಿಕಾರಿಗಳು ಮತ್ತು ಸದಸ್ಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net