ಹೋರಾಟಕ್ಕೆ ಕಾರ್ಮಿಕರ ಬೆಂಬಲ ಅಗತ್ಯ

gvt-1
ಗಂಗಾವತಿ ಅಖಿಲ ಭಾರತ ಸಂಘಟನೆಗಳ ಕೇಂದ್ರೀಯ ಸಮಿತಿ ಕಚೇರಿ ಆವರಣದಲ್ಲಿ ಸಾರ್ವತ್ರಿಕ ಮುಷ್ಕರದ ಪೂರ್ವಭಾವಿ ಸಭೆಯಲ್ಲಿ ಎಐಸಿಸಿಟಿಯು ರಾಜ್ಯ ಘಟಕದ ಅಧ್ಯಕ್ಷ ಪಿ.ಪಿ.ಅಪ್ಪಣ್ಣ ಮಾತನಾಡಿದರು. ಜಿಲ್ಲಾಧ್ಯಕ್ಷ ವಿಜಯದೊರೈರಾಜು, ಪದಾಧಿಕಾರಿಗಳಾದ ಸಣ್ಣ ಹನುಮಂತಪ್ಪ ಹುಲಿಹೈದರ, ಪರಶುರಾಮ್, ಕೇಶವ ನಾಯ್ಕ, ಮಾಯಮ್ಮ, ಪಾರ್ವತಮ್ಮ ಇತರರಿದ್ದರು.
Published on

ಗಂಗಾವತಿ; ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 20ರಂದು ದೇಶಾದ್ಯಂತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು, ಹೋರಾಟಕ್ಕೆ ಕಾರ್ಮಿಕರ ಬೆಂಬಲ ಅಗತ್ಯವಿದೆ ಎಂದು ಎಐಸಿಸಿಟಿಯು ರಾಜ್ಯಾಧ್ಯಕ್ಷ ಪಿ.ಪಿ.ಅಪ್ಪಣ್ಣ ಹೇಳಿದರು.

ನಗರದ ಅಖಿಲ ಭಾರತ ಸಂಘಟನೆಗಳ ಕೇಂದ್ರೀಯ ಸಮಿತಿ ಕಚೇರಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಮಿಕ ಸಂಘಟನೆಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರ ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸುತ್ತಿದ್ದು, ದಿನಕ್ಕೊಂದು ಕಾಯ್ದೆ ಮೂಲಕ ಸಂಘಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಎಂಟು ಗಂಟೆ ಕೆಲಸದ ಅವಧಿ, ಕಾಯಂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದೇಶಾದ್ಯಂತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾಧ್ಯಕ್ಷ ವಿಜಯದೊರೈರಾಜು ಮಾತನಾಡಿ, ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಸರ್ಕಾರಕ್ಕೆ ಸಂಘಟನೆ ಮೂಲಕ ಉತ್ತರ ನೀಡಬೇಕಿದೆ. ಸಾರ್ವತ್ರಿಕ ಮುಷ್ಕರದಲ್ಲಿ ಕಾರ್ಮಿಕರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಒಗ್ಗಟ್ಟು ಕಾಯ್ದುಕೊಳ್ಳಬೇಕಿದೆ. ಸಂಘಟನೆಗಳ ಎಲ್ಲ ಸದಸ್ಯರು ಕಡ್ಡಾಯ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ವಿವಿಧ ಸಂಘಟನೆ ಪದಾಧಿಕಾರಿಗಳಾದ ಸಣ್ಣ ಹನುಮಂತಪ್ಪ ಹುಲಿಹೈದರ, ಪರಶುರಾಮ್, ಕೇಶವ ನಾಯ್ಕ, ಹನುಮಂತಪ್ಪ, ಮಾಯಮ್ಮ, ಬಾಬರ್, ಕೆ.ರಮೇಶ, ಅಮೀರ್ ಅಲಿ, ಪಾರ್ವತಮ್ಮ, ಗಾಲಿ ಹುಲಿಗೆಮ್ಮ, ಇಂದ್ರಮ್ಮ, ಕೊಟ್ರೇಶ, ದುರುಗಪ್ಪ , ಹುಲ್ಲೇಶ ಭಾಗ್ಯನಗರ, ದುರುಗಪ್ಪ ಕಾರಟಗಿ, ರವಿ ಕಾರಟಗಿ, ಪೌರಕಾರ್ಮಿಕರು, ವಾಹನ ಚಾಲಕರು, ಕಟ್ಟಡ ಕಾರ್ಮಿಕರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net