ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಒತ್ತಾಯ

gangavathi citu protest
Published on

ಗಂಗಾವತಿ: ಮಣಿಪುರ ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ಸಿಐಟಿಯು ಜಿಲ್ಲಾ ಸಮಿತಿ, ಕರ್ನಾಟಕ ಪ್ರಾಂತ ರೈತ ಸಂಘ, ಪ್ರಾಂತ ಕೃಷಿ ಕೂಲಿಕಾರರ ಸಂಘ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಶುಕ್ರವಾರ ಮನವಿ ಸಲ್ಲಿಸಿದವು.

ಅಮಾನವೀಯ ಕೃತ್ಯ

ಸಿಐಟಿಯು ಜಿಲ್ಲಾಧ್ಯಕ್ಷ ನಿರುಪಾದಿ ಬೆಣಕಲ್ ಮಾತನಾಡಿ, ಮಣಿಪುರದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ದೌರ್ಜನ್ಯ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಮೌನವಹಿಸಿದೆ. ಇಂತಹ ಅಮಾನವೀಯ ಕೃತ್ಯದಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಬೇಕು. ಶಾಂತಿ ಮತ್ತು ಸುವ್ಯವಸ್ಥೆಗೆ ಕೇಂದ್ರ ಸರ್ಕಾರ ಮುಂದಾಗಬೇಕಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

ವಿವಿಧ ಸಂಘಟನೆ ಪದಾಧಿಕಾರಿಗಳಾದ ಶಿವಣ್ಣ ಬೆಣಕಲ್, ಮರಿನಾಗಪ್ಪ ಡಗ್ಗಿ, ಮಂಜುನಾಥ ಡಗ್ಗಿ, ಕೃಷ್ಣಪ್ಪ ನಾಯಕ, ಕನಕರಾಯ, ಮುತ್ತಣ್ಣ, ಶ್ರೀನಿವಾಸ, ಬಸವರಾಜ, ರವಿಕುಮಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net