ಯೋಜನೆಗಳೇ ಗೆಲುವಿಗೆ ಸಹಕಾರಿ

gangavathi bjp office
ಗಂಗಾವತಿಯ ಕನಕಗಿರಿ ರಸ್ತೆಯಲ್ಲಿ ಬಿಜೆಪಿ ಕಚೇರಿಗೆ ಚಾಲನೆ ನೀಡಿದ ಶಾಸಕ ಗಾಲಿ ಜನಾರ್ದನರೆಡ್ಡಿ ಮಂಗಳವಾರ ಮಾತನಾಡಿದರು. ಮಾಜಿ ಶಾಸಕ ಪರಣ್ಣಮುನವಳ್ಳಿ, ಮಾಜಿ ಸಂಸದ ಎಸ್.ಶಿವರಾಮನಗೌಡ, ಅಭ್ಯರ್ಥಿ ಬಸವರಾಜ ಕ್ಯಾವಟರ್ ಇತರರಿದ್ದರು.
Published on


ಗಂಗಾವತಿ: ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿ ಯೋಜನೆಗಳೇ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದ್ದು, ವಿಶ್ವ ಮೆಚ್ಚಿದ ಶ್ರೇಷ್ಟ ನಾಯಕ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಕನಕಗಿರಿ ರಸ್ತೆಯಲ್ಲಿ ಬಿಜೆಪಿ ಕಚೇರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲವು ಖಚಿತವಾಗಿದ್ದು, ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್ ನೀಡಲಾಗುವುದು. ಸಾಮೂಹಿಕ ನಾಯಕತ್ವದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ಮಾಜಿ ಶಾಸಕ ಪರಣ್ಣಮುನವಳ್ಳಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಸಬ್‌ಕಾ ಸಾಥ್, ಸಬ್‌ಕಾ ವಿಕಾಸ ಪರಿಕಲ್ಪನೆಯಡಿ ಕೇಂದ್ರ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು. ಮಾಜಿ ಸಂಸದ ಎಸ್.ಶಿವರಾಮನಗೌಡ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್. ಗಿರೇಗೌಡ, ಎಚ್.ಎಂ.ತಿಪ್ಪೇರುದ್ರಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್, ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಧ್ಯಕ್ಷ ರಾಜುನಾಯಕ, ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್, ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳಾದ ರಮೇಶ ನಾಡಿಗೇರ್, ವೆಂಕಟೇಶ ಜಂತಕಲ್, ಮನೋಹರಗೌಡ ಹೇರೂರು, ಕಾಶೀನಾಥ ಚಿತ್ರಗಾರ ಇದ್ದರು.

ಗಂಗಾವತಿಯ ಕನಕಗಿರಿ ರಸ್ತೆಯಲ್ಲಿ ಬಿಜೆಪಿ ಕಚೇರಿಗೆ ಚಾಲನೆ ನೀಡಿದ ಶಾಸಕ ಗಾಲಿ ಜನಾರ್ದನರೆಡ್ಡಿ ಮಂಗಳವಾರ ಮಾತನಾಡಿದರು. ಮಾಜಿ ಶಾಸಕ ಪರಣ್ಣಮುನವಳ್ಳಿ, ಮಾಜಿ ಸಂಸದ ಎಸ್.ಶಿವರಾಮನಗೌಡ, ಅಭ್ಯರ್ಥಿ ಬಸವರಾಜ ಕ್ಯಾವಟರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net