ದೇವಾಲಯ ಅಭಿವೃದ್ಧಿಗೆ ಆದ್ಯತೆ

MASS MARRIAGE
ಗಂಗಾವತಿ ಜುಲಾಯಿನಗರದ ಶ್ರೀ ಉದ್ಭವ ಮಹಾಲಕ್ಷ್ಮೀ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್ ಭಾನುವಾರ ಮಾತನಾಡಿದರು. ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ್, ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಚೌಡ್ಕಿ ಇತರರಿದ್ದರು.
Published on

ಗಂಗಾವತಿ: ದುಂದುವೆಚ್ಚದ ಕಡಿವಾಣದ ಜತೆಗೆ ಸಾಮರಸ್ಯ ಹೆಚ್ಚಿಸಲು ಸಾಮೂಹಿಕ ಮದುವೆ ಸಹಕಾರಿ ಎಂದು ನಗರಸಭೆ ಅಧ್ಯಕ್ಷ ಮೌಲಸಾಬ್ ದಾದೇಸಾಬ್ ಹೇಳಿದರು.

ನಗರದ ಜುಲಾಯಿನಗರದ ಶ್ರೀ ಉದ್ಭವ ಮಹಾಲಕ್ಷ್ಮೀ ದೇವಾಲಯದಲ್ಲಿ ಶರನ್ನವರಾತ್ರೋತ್ಸವ ನಿಮಿತ್ತ ಭಾನುವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಧಾರ್ಮಿಕ ಕಾರ್ಯಗಳು ಮನಸ್ಸಿಗೆ ನೆಮ್ಮದಿ ನೀಡುತ್ತಿದ್ದು, ಉತ್ತಮ ಸಂಸ್ಕಾರ ದೊರೆಯಲಿದೆ. ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಮ ಜತೆಗೆ ದೇವಾಲಯ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ್ ಮಾತನಾಡಿ, ನವಜೋಡಿಗಳು ಪರಸ್ಪರ ಅರಿತು ಜೀವನ ನಡೆಸಬೇಕಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ಇದಕ್ಕೂ ಮುನ್ನ ಕುಂಭೋತ್ಸವ, ವಿಶೇಷ ಪೂಜೆ, ಅಭಿಷೇಕ, ಕುಂಕುಮಾರ್ಚನೆ, ಲಲಿತ ಸಹಸ್ರನಾಮ ಪಾರಾಯಣ, ನಾಲ್ಕು ಜೋಡಿಗಳ ಸಾಮೂಹಿ ವಿವಾಹ ಮತ್ತು ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಚೌಡ್ಕಿ, ಸದಸ್ಯ ನೀಲಕಂಠಪ್ಪ ಕಟ್ಟಿಮನಿ, ಮಾಜಿ ಅಧ್ಯಕ್ಷ ಎಸ್.ರಾಘವೇಂದ್ರ ಶ್ರೇಷ್ಟಿ, ಮುಖಂಡರಾದ ಡಾ.ಅಮರೇಶ ಪಾಟೀಲ್, ಮನೋಹರ ಗೌಡ ಹೇರೂರು, ಸಂಗಯ್ಯಸ್ವಾಮಿ ಸಂಶಿಮಠ, ದೇವಾಲಯ ಸಮಿತಿ ಪದಾಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net