ಗುಡಿಸಲು ವಾಸಿಗಳಿಗೆ ಮನೆಗಳನ್ನು ನೀಡಿ

PROTEST
ವಸತಿ ರಹಿತರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸುವಂತೆ ಒತ್ತಾಯಿಸಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಜಿಲ್ಲಾ ಸಮಿತಿ ಸದಸ್ಯರು ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಪಂ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು. ಕಾರ್ಯದರ್ಶಿ ಎ.ಎಲ್.ತಿಮ್ಮಣ್ಣ, ಪದಾಧಿಕಾರಿಗಳಾದ ಎ.ಹುಲುಗಪ್ಪ, ಶೇಖಮ್ಮ, ಗಂಗಮ್ಮ, ಹುಲಿಗೆಮ್ಮ, ಶರಣಮ್ಮ ಇತರರಿದ್ದರು.
Published on

ಗಂಗಾವತಿ: ವಸತಿ ರಹಿತರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸುವಂತೆ ಒತ್ತಾಯಿಸಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಜಿಲ್ಲಾ ಸಮಿತಿ ಸದಸ್ಯರು ತಾಲೂಕಿನ ಚಿಕ್ಕಜಂತಕಲ್ ಗ್ರಾಪಂ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿ ಗ್ರಾಪಂ ಕಾರ್ಯದರ್ಶಿ ರವೀಂದ್ರ ಜೋಶಿಗೆ ಮನವಿ ಸಲ್ಲಿಸಿದರು.

ಸಮಿತಿ ಕಾರ್ಯದರ್ಶಿ ಎ.ಎಲ್.ತಿಮ್ಮಣ್ಣ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಹೆಚ್ಚಾಗಿದ್ದು, ಚಿಕ್ಕ ಗುಡಿಸಲಲ್ಲಿ 10ಕ್ಕಿಂತ ಹೆಚ್ಚು ಜನ ವಾಸಿಸುವ ಸ್ಥಿತಿ ಬಂದಿದೆ.

ನಿವೇಶನ ಮತ್ತು ಮನೆಗಾಗಿ ವಸತಿರಹಿತರು ಹಲವು ವರ್ಷಗಳಿಂದ ಅರ್ಜಿ ಸಲ್ಲಿಸುತ್ತಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ರಾಜೀವ್‌ಗಾಂಧಿ ವಸತಿ ಯೋಜನೆಯಡಿ ನಿವೇಶನ ಮತ್ತು ಮನೆ ನಿರ್ಮಿಸಿಕೊಡುವ ಭರವಸೆ ನೀಡಿದ್ದ ಜನಪ್ರತಿನಿಧಿಗಳು ನಾಪತ್ತೆಯಾಗಿದ್ದಾರೆ. ಪರಿಹಾರ ದೊರೆಯುವರೆಗೂ ಹೋರಾಟ ಮುಂದುವರಿಯಲಿದೆ ಎಂದರು. ಪದಾಧಿಕಾರಿಗಳಾದ ಎ.ಹುಲುಗಪ್ಪ, ಶೇಖಮ್ಮ, ಗಂಗಮ್ಮ, ಹುಲಿಗೆಮ್ಮ, ಶರಣಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net